ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿರುವ ಕೋವಿಡ್‌ ಕೇರ್‌ ಸೆಂಟರ್‌ಗೆ ಸಿದ್ದರಾಮಯ್ಯ ಭೇಟಿ, ಪರಿಶೀಲನೆ

ಬೆಂಗಳೂರು: ಬೆಂಗಳೂರು ಹೊರವಲಯದ ನೆಲಮಂಗಲ ಬಳಿ ಇರುವ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿರುವ ಕೊವೀಡ್‌ ಕೇರ್ ಸೆಂಟರ್‌ಗೆ ವಿರೋಧ ಪಕ್ಷದ ನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಂಗಳವಾರ ಸಿದ್ದರಾಮಯ್ಯ ಹಾಗೂ ಇತರ ಕಾಂಗ್ರೆಸ್ ಮುಖಂಡರು ಕೋವಿಡ್‌ ಕೇರ್ ಸೆಂಟರ್‌ಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಹಾಗೂ ಸೌಲಭ್ಯಗಳ ಕುರಿತಾಗಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಕೋವಿಡ್‌ ಪಾಸಿಟಿವ್‌ ಸೋಂಕಿತರಿಗೆ ಚಿಕಿತ್ಸೆ ನೀಡುವ ಉದ್ದೇಶದಿಂದ ಈ ಬೃಹತ್ ಕೋವಿಡ್‌ ಕೇರ್‌ ಸೆಂಟರ್‌ವನ್ನು ಆರಂಭಿಸಲಾಗಿದೆ. 10,100 ಹಾಸಿಗೆ ಸಾಮರ್ಥ್ಯದ ಈ ಕೋವಿಡ್ ಕೇರ್ ಸೆಂಟರ್‌ನಲ್ಲಿ ಎಲ್ಲ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಪ್ರತಿ ನೂರು ಮಂದಿಗೆ ಒಬ್ಬ ವೈದ್ಯ, ಇಬ್ಬರು ನರ್ಸ್‌ಗಳು, ಒಬ್ಬ ಸಹಾಯಕರು, ಒಬ್ಬರು ಸ್ವಚ್ಛತಾ ಸಿಬ್ಬಂದಿ ಮತ್ತು ಇಬ್ಬರು ಬಿಬಿಎಂಪಿ ಮಾರ್ಷಲ್‌ಗಳನ್ನು ನಿಯೋಜಿಸಲಾಗುತ್ತಿದೆ ಎಂದು ಸರ್ಕಾರ ಮಾಹಿತಿ ನೀಡಿದೆ. ಕೆಲ ದಿನಗಳ ಹಿಂದೆ ಸಿಎಂ ಬಿಎಸ್‌ ಯಡಿಯೂರಪ್ಪ ಇಲ್ಲಿಗೆ ತೆರಳಿ ಪರಿಶೀಲನೆ ನಡೆಸಿದ್ದರು. ಇದೀಗ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಹಾಗೂ ಇತರ ಕಾಂಗ್ರೆಸ್ ಮುಖಂಡರು ತೆರಳಿ ಪರಿಶೀಲನೆ ನಡೆಸಿದರು.


from India & World News in Kannada | VK Polls https://ift.tt/3jsnuf1

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...