: ಜನ್ಮ ದಿನದಂದೇ ಮತ್ತೆ ಬಂಧನಕ್ಕೊಳಗಾದ ಭೀಮಾ ತೀರದ ಮುಖಂಡ ಮಹಾದೇವ ಸಾಹುಕಾರ ಬೈರಗೊಂಡಗೆ ಸೋಂಕು ದೃಢಪಟ್ಟಿದೆ ಎಂದು ಎಸ್ಪಿ ಅನುಪಮ ಅಗರವಾಲ ತಿಳಿಸಿದ್ದಾರೆ. ಇಂಡಿ ಪಟ್ಟಣದ ಚಿನ್ನದ ವರ್ತಕ ನಾಮದೇವ ಡಾಂಗೆ ಬಳಿ ಹಣದ ಬೇಡಿಕೆ ಇಟ್ಟಿದ್ದರಿಂದ ಬುಧವಾರ ಪೊಲೀಸರು ಭೈರಗೊಂಡನನ್ನು ಬಂಧಿಸಿದ್ದರು. ಈ ವೇಳೆ ಸಾಹುಕಾರ್ ಗೆ ಕೊವಿಡ್ ಟೆಸ್ಟ್ ಮಾಡಿಸಲಾಗಿತ್ತು. ಆತನ ಗಂಟಲು ದ್ರವದ ಸ್ಯಾಂಪಲ್ ಪರೀಕ್ಷೆಗೆ ಕಳಿಸಲಾಗಿತ್ತು. ರಾತ್ರಿ ಬಂದ ವರದಿಯಲ್ಲಿ ಪಾಸಿಟಿವ್ ಧೃಡವಾಗಿದೆ ಎಂದವರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಭೈರಗೊಂಡನನ್ಮು ದರ್ಗಾ ಜೈಲಿನಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ಇರಿಸಲಾಗಿದ್ದು, ಆತನಿಗೆ ಚಿಕಿತ್ಸೆ ನೀಡಲಾಗ್ತಿದೆ ಎಂದು ಎಸ್ಪಿ ಅನುಪಮ ಅಗರ್ವಾಲ್ ತಿಳಿಸಿದ್ದಾರೆ.
from India & World News in Kannada | VK Polls https://ift.tt/2E6I6t3