ಬೆಂಗಳೂರು: ಬಡ ಪೋಷಕರು ಕೊರೊನಾ ಕಾಲದಲ್ಲಿ ಯಮಯಾತನೆ ಅನುಭವಿಸುತ್ತಿದ್ದಾರೆ ಈ ನಿಟ್ಟಿನಲ್ಲಿ ಸರ್ಕಾರ ಎಚ್ಚರ ವಹಿಸುವಂತೆ ಮಾಜಿ ಸಿಎಂ ಮನವಿ ಮಾಡಿದ್ದಾರೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ತಾಯಿ ಒಬ್ಬರು ಮಕ್ಕಳ ಆನ್ಲೈನ್ ಶಿಕ್ಷಣಕ್ಕಾಗಿ ತಾಳಿ ಮಾರಿಕೊಂಡ ಘಟನೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಅವರು ಈ ಘಟನೆ ಘಟನೆ ನನ್ನ ಹೃದಯ ಹಿಂಡುತ್ತಿದೆ ಎಂದಿದ್ದಾರೆ. ಕೊರೊನಾ ಸೋಂಕು ಜನರ ಜೀವ-ಜೀವನದ ಜೊತೆ ಮಾತ್ರ ಚೆಲ್ಲಾಟ ಮಾಡುತ್ತಿಲ್ಲ. ಇಡೀ ಮನುಕುಲದ ರೀತಿ-ರಿವಾಜುಗಳನ್ನು ಬುಡಮೇಲು ಮಾಡುತ್ತಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ತಾಯಿ ಒಬ್ಬರು ಮಕ್ಕಳ ಆನ್ಲೈನ್ ಶಿಕ್ಷಣಕ್ಕಾಗಿ ತಾಳಿ ಮಾರಿಕೊಂಡ ಘಟನೆ ನನ್ನ ಹೃದಯ ಹಿಂಡುತ್ತಿದೆ ಎಂದು ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ. ನಾಲ್ಕು ಮಕ್ಕಳ ಪೈಕಿ 7 ಮತ್ತು 8 ನೇ ತರಗತಿ ಓದುತ್ತಿರುವ ಇಬ್ಬರು ಮಕ್ಕಳ ಆನ್ಲೈನ್ ಶಿಕ್ಷಣಕ್ಕಾಗಿ ಮನೆಯಲ್ಲಿ ಟಿವಿ ಇಲ್ಲದ ಕಾರಣ ತಾಳಿಯನ್ನು ಅಡವಿಟ್ಟು ನರಗುಂದ ತಾಲೂಕಿನ ರಡ್ಡೇರ ನಾಗನೂರು ಗ್ರಾಮದ ಕಸ್ತೂರಿ ಎಂಬ ಮಹಾತಾಯಿ ದುಸ್ಥಿತಿ ಕಂಡು ಕಣ್ಣಾಲಿಗಳು ತುಂಬಿ ಬಂದಿವೆ. ಇಂತಹ ನೂರಾರು ನಿದರ್ಶನಗಳು ಸದ್ದಿಲ್ಲದೆ, ಸುದ್ದಿಯಾಗದೆ ಬಡ ಪೋಷಕರು ಕೊರೋನಾ ಕಾಲದಲ್ಲಿ ಯಮಯಾತನೆ ಅನುಭವಿಸುತ್ತಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ನಮ್ಮ ಸಮಾಜ ಮತ್ತು ಸರ್ಕಾರ ಎಚ್ಚರ ವಹಿಸಬೇಕಿದೆ. ಆನ್ಲೈನ್ ಶಿಕ್ಷಣದ ಅಪಾಯ ಮತ್ತು ಬಡ ಪೋಷಕರು ಎದುರಿಸುತ್ತಿರುವ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಕ್ಷಣವೇ ಸಮಗ್ರ ಯೋಜನೆಯೊಂದನ್ನು ಕಾರ್ಯಗತಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
from India & World News in Kannada | VK Polls https://ift.tt/2Xdfrt8