ಹೊರ ರಾಜ್ಯಗಳಿಂದ ಹೆಚ್ಚು ಜನ ಬಂದಿದ್ದೇ ಸೋಂಕು ಪ್ರಕರಣಗಳ ಏರಿಕೆಗೆ ಕಾರಣ! ಶ್ರೀರಾಮುಲು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗಲು ಹೊರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯ ಜನರು ಬಂದಿದ್ದೇ ಕಾರಣ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ. ಈ ಕುರಿತಾಗಿ ಟ್ವೀಟ್‌ ಮಾಡಿರುವ ಅವರು ರಾಜ್ಯದಲ್ಲಿ ಸೋಂಕು ಪ್ರಕರಣಗಳ ಸಂಖ್ಯೆ ತೀವ್ರವಾಗಿ ಏರಿಕೆಯಾಗಲು ಕಾರಣ ಏನು ಎಂಬುವುದನ್ನು ತಿಳಿಸಿದ್ದಾರೆ. ಕೋವಿಡ್19 ಸೋಂಕು ನಿಯಂತ್ರಣಕ್ಕೆ ಸರ್ಕಾರ ಕಾಲಕಾಲಕ್ಕೆ ತ್ವರಿತವಾಗಿ ಅನೇಕ ಉಪಕ್ರಮಗಳನ್ನು ಕೈಗೊಳ್ಳುತ್ತಲೇ ಬಂದಿದೆ. ಲಾಕ್ ಡೌನ್ ತೆರವು ಮಾಡಿದ ನಂತರ ಹೊರ ರಾಜ್ಯಗಳಿಂದ ಹೆಚ್ಚು ಜನ ಬಂದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೋಂಕು ಹೆಚ್ಚಿತು ಎಂದಿದ್ದಾರೆ. ಮೊದಲನೇ ಹಂತದ ಸಂಪೂರ್ಣ ತೆರವಿನ ಬಳಿಕ ಮಹಾರಾಷ್ಟ್ರ, ತಮಿಳುನಾಡು ಸೇರಿದಂತೆ ಹೊರರಾಜ್ಯಗಳಲ್ಲಿ ಸಿಕ್ಕಿಹಾಕಿಕೊಂಡಿದ್ದ ರಾಜ್ಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದರು. ಮಹಾರಾಷ್ಟ್ರದಿಂದ ಬಂದವರಿಗೆ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ ಮಾಡಲಾಗಿತ್ತು. ಕೆಲವು ಕಡೆ ಲ್ಯಾಬ್ ಟೆಕ್ನೀಷಿಯನ್ ಗಳು ಸೋಂಕಿಗೆ ತುತ್ತಾಗಿದ್ದರಿಂದ ಲ್ಯಾಬ್ ಗಳನ್ನು ಸೀಲ್ ಮಾಡಲಾಯಿತು. ಇದರಿಂದ ಪರೀಕ್ಷೆ ಮಾಡಲು ತೊಂದರೆಯಾಯಿತು. ಈ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷಾ ಪ್ರಮಾಣದಲ್ಲಿ ಹೆಚ್ಚಳ ಹಾಗೂ ಜಿಲ್ಲಾ ಮಟ್ಟದಲ್ಲಿ ಲ್ಯಾಬ್ ಗಳ ಸಂಖ್ಯೆಯನ್ನು ಜಾಸ್ತಿ ಮಾಡುತ್ತಿದ್ದೇವೆ‌. ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಜತೆ ನಾವೆಲ್ಲ ಒಂದು ತಂಡವಾಗಿ ಸೋಂಕಿನ ನಿಯಂತ್ರಣಕ್ಕಾಗಿ ಹಗಲಿರುಳೂ ಕೆಲಸ ಮಾಡುತ್ತಿದ್ದೇವೆ. ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ ಭಾರತದಲ್ಲಿ ಅಕ್ಟೋಬರ್‌, ನವೆಂಬರ್ ನಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗಬಹುದು. ಈ ಬಗ್ಗೆ ಆಶಾವಾದಿಗಳಾಗಿರೋಣ ಎಂದಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ತೀವ್ರವಾಗಿ ಏರಿಕೆಯಾಗುತ್ತಿದೆ. ಮಂಗಳವಾರದ ಅಂಕಿಅಂಶಗಳ ಪ್ರಕಾರ 67,420 ಪ್ರಕರಣಗಳು ವರದಿಯಾಗಿವೆ. ಈ ಪೈಕಿ 42,216 ಪ್ರಕರಣಗಳು ಸಕ್ರೀಯವಾಗಿವೆ.


from India & World News in Kannada | VK Polls https://ift.tt/3ePl46N

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...