ಮಣಿಪುರದಲ್ಲಿ ಉಗ್ರರಿಂದ ಐಇಡಿ ಸ್ಫೋಟ: ಮೂವರು ಅಸ್ಸಾಂ ರೈಫಲ್ಸ್ ಯೋಧರು ಹುತಾತ್ಮ!

ಚಂಡೇಲ್: ಇಲ್ಲಿನ ಎಂಬ ಪ್ರಾದೇಶಿಕ ಉಗ್ರ ಸಂಘಟನೆ ನಡೆಸಿದ ಭೀಕರ ಭಯೋತ್ಪದಕ ದಾಳಿಯಲ್ಲಿ, ಮೂವರು ಯೋಧರು ಹುತಾತ್ಮರಾಗಿದ್ದಾರೆ. ಮಣಿಪುರದ ಚಂಡೇಲ್ ಜಿಲ್ಲೆಯ ಮಯನ್ಮಾರ್ ಗಡಿ ಬಳಿ ಪೀಪಲ್ಸ್ ಲಿಬರೇಷನ್ ಆರ್ಮಿ ಉಗ್ರ ಸಂಘಟನೆಯ ಭಯೋತ್ಪಾದಕರು, ಭದ್ರತಾ ಪಡೆಗಳ ಮೇಲೆ ಭೀಕರ ದಾಳಿ ಮಾಡಿದ್ದಾರೆ. ಮೊದಲು ಭದ್ರತಾ ಪಡೆಗಳತ್ತ ಐಇಡಿ ಬಾಂಬ್ ಸ್ಫೋಟಿಸಿದ ಉಗ್ರರು ನಂತರ ಮನಬಂದತೆ ಗುಂಡು ಹಾರಿಸಿದ್ದಾರೆ. ಪರಿಣಾಮವಾಗಿ ಮೂವರು ಅಸ್ಸಾಂ ರೈಫಲ್ಸ್ ಯೋಧರು ಸ್ಥಳದಲ್ಲೇ ಹುತಾತ್ಮರಾದರೆ, ಇತರ ನಾಲ್ವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ದಾಳಿ ನಡೆಸಿ ಪರಾರಿಯಾಗಿರುವ ಉಗ್ರರಿಗೆ ಶೋಧ ಕಾರ್ಯ ಮುಂದುವರೆದಿದ್ದು, ಉಗ್ರರು ಮಯನ್ಮಾರ್ ಗಡಿಯಲ್ಲಿ ತಲೆ ಮರೆಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ


from India & World News in Kannada | VK Polls https://ift.tt/2P6lfQy

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...