ಕೋವಿಡ್‌ ಅವ್ಯವಹಾರ ಆರೋಪ: ರಾಜ್ಯ ಸರ್ಕಾರದ ವಿರುದ್ಧ ‘ಕೈ’ ಸಿಕ್ಕಿದೆ ಪ್ರಬಲ ಅಸ್ತ್ರ

ಬೆಂಗಳೂರು: ಕೋವಿಡ್‌ ಚಿಕಿತ್ಸೆಗಾಗಿ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರದ ಆರೋಪ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಪಾಲಿಗೆ ಪ್ರಬಲ ಅಸ್ತ್ರ ಸಿಕ್ಕಂತಾಗಿದೆ. ಈಗಾಗಲೇ ಪತ್ರಿಕಾಗೋಷ್ಠಿ ಹಾಗೂ ಸಾಮಾಜಿಕ ಜಾಲತಾಣಗಳ ವಿರುದ್ಧ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್ ಮುಖಂಡರು ಇದೀಗ ಜಿಲ್ಲಾ ಮಟ್ಟದಲ್ಲೂ ಹೋರಾಟವನ್ನು ನಡೆಸಲು ನಿರ್ಧರಿಸಿದ್ದಾರೆ. ರಾಜ್ಯದ ಪ್ರಮುಖ 30 ನಾಯಕರಿಗೆ ಜಿಲ್ಲೆಗಳ ಜವಾಬ್ದಾರಿ ನೀಡಿ ವೈದ್ಯಕೀಯ ಉಪಕರಣಗಳ ಖರೀದಿ ಅವ್ಯವಹಾರದ ಬಗ್ಗೆ ತಾಲೂಕು ಮಟ್ಟದಲ್ಲಿ ಜನಾಂದೋಲನ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. ಕೋವಿಡ್‌ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ವಿರೋಧ ಪಕ್ಷದ ನಾಯಕ ಆರೋಪ ಮಾಡಿದ್ದರು. ಕೆಲವೊಂದು ದಾಖಲೆಗಳ ಸಹಿತವಾಗಿ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಆದರೆ ಈ ಆರೋಪವನ್ನು ಸರ್ಕಾರ ನಿರಾಕರಿಸಿದೆ. ಡಿಸಿಎಂ ಡಾ. ಅಶ್ವತ್ಥನಾರಾಯಣ ಹಾಗೂ ಆರೋಗ್ಯ ಸಚಿವ ಶ್ರೀರಾಮುಲು ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ತಮ್ಮ ಇಲಾಖೆಯ ಮೇಲೆ ಬಂದಿರುವ ಆರೋಪವನ್ನು ನಿರಾಕರಣೆ ಮಾಡಿದ್ದಾರೆ. ಕಾಂಗ್ರೆಸ್ ಈಗಾಗಲೇ ಲೆಕ್ಕಕೊಡಿ ಅಭಿಯಾನವನ್ನು ಆರಂಭಿಸಿದ್ದು ಮುಂದಿನ ದಿನಗಳಲ್ಲಿ ಇದನ್ನು ಜನಾಂದೋಲನವಾಗಿ ರೂಪಿಸಲು ತಂತ್ರಗಾರಿಕೆ ನಡೆಸುತ್ತಿದೆ. ಹಗರಣಗಳ ಕುರಿತಾಗಿ ಸರ್ಕಾರ ನೀಡಿರುವ ಸ್ಪಷ್ಟೀಕರಣ ಬೆನ್ನಲ್ಲೇ ಮತ್ತೆ ಕೆಲವೊಂದು ಪ್ರಶ್ನೆಗಳನ್ನು ಸಿದ್ದರಾಮಯ್ಯ ಮುಂದಿಟ್ಟಿದ್ದಾರೆ. “ನಾನು ಕೊರೊನಾ ನಿಯಂತ್ರಣದ ಸಲಕರಣೆಗಳ ಲೆಕ್ಕ ಮಾತ್ರ ಕೇಳಿದ್ದಲ್ಲ. ಆಹಾರ ಧಾನ್ಯ, ಮತ್ತು ಆಹಾರ ಸಾಮಗ್ರಿಗಳ ಕಿಟ್, ಮತ್ತು ಆಸ್ಪತ್ರೆಗಳಿಗೆ‌ ಖರೀದಿಸಲಾದ ಬೆಡ್ ಗಳ ಬೆಲೆ, ಕ್ವಾರಂಟೈನ್ ಕೇಂದ್ರಗಳು, ಐಸೋಲೇಷನ್ ವಾರ್ಡ್ ಗಳಿಗೆ ಆಗಿರುವ ಖರ್ಚಿನ ವಿವರವನ್ನೂ ಕೇಳಿದ್ದೇನೆ. ಆ ಲೆಕ್ಕ‌ ಎಲ್ಲಿದೆ?” ಎಂದು ಪ್ರಶ್ನಿಸಿದ್ದಾರೆ. ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಹೋರಾಟ ನಡೆಸುವ ಮೂಲಕ ಸರ್ಕಾರವನ್ನು ಮುಜುಗರಕ್ಕೀಡು ಮಾಡುವುದು ಕಾಂಗ್ರೆಸ್ ತಂತ್ರವಾಗಿದೆ. ಮತ್ತೊಂದು ಕಡೆಯಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಕೂಡಾ ಹೆಚ್ಚಾಗುತ್ತಿದೆ. ಬಡ ಜನರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಸಕಾಲದಲ್ಲಿ ಚಿಕಿತ್ಸೆ ದೊರಕುತ್ತಿಲ್ಲ. ಸರ್ಕಾರದ ಈ ಎಲ್ಲಾ ವೈಫಲ್ಯಗಳು ಹಾಗೂ ಭ್ರಷ್ಟಾಚಾರದ ಆರೋಪಗಳನ್ನು ಜನರ ಮುಂದಿಡುವ ಮೂಲಕ ರಾಜ್ಯ ಮಟ್ಟದಲ್ಲಿ ಹೋರಾಟವನ್ನು ರೂಪಿಸಲು ಕಾಂಗ್ರೆಸ್ ಮುಖಂಡರು ನಿರ್ಧರಿಸಿದ್ದಾರೆ.


from India & World News in Kannada | VK Polls https://ift.tt/3heQqFs

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...