ಟೈಗರ್ ಜಿಂದಾ ಹೈ: ಕಾಂಗ್ರೆಸ್‌ಗೆ ಎಚ್ಚರಿಕೆಯ ಸಂದೇಶ ರವಾನಿಸಿದ ಜ್ಯೋತಿರಾದಿತ್ಯ ಸಿಂಧಿಯಾ!

ಭೋಪಾಲ್: ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೊಂಡಿದೆ. ನಿನ್ನೆ(ಗುರುವಾರ) ನಡೆದ ಸಂಪುಟ ವಿಸ್ತರಣೆ ಸಮಾರಂಭದಲ್ಲಿ 28 ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇನ್ನು ಶಿವರಾಜ್ ಸಿಂಗ್ ಚೌಹಾಣ್ ಸಂಪುಟದಲ್ಲಿ ಬಹುತೇಕ ಸಚಿವರು ಬೆಂಬಲಿಗರಿದ್ದು, ತ್ಯಜಿಸಿ ಬಿಜೆಪಿ ಸೇರಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಭಾರೀ ಜಾಕ್‌ಪಾಟ್ ಹೊಡೆದಿದ್ದಾರೆ. ಕ್ಯಾಬಿನೆಟ್ ವಿಸ್ತರಣೆ ಬಳಿಕ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಜ್ಯೋತಿರಾದಿತ್ಯ ಸಿಂಧಿಯಾ, ಟೈಗರ್ ಜಿಂದಾ ಹೈ(ಹುಲಿ ಬದುಕಿದೆ) ಎಂದು ಹೇಳುವ ಮೂಲಕ ಕಾಂಗ್ರೆಸ್‌ಗೆ ಟಾಂಗ್ ನೀಡಿದರು. ಮಧ್ಯಪ್ರದೇಶವನ್ನು ಲೂಟಿ ಮಾಡಿದ ಕಮಲ್‌ನಾಥ್ ಹಾಗೂ ದಿಗ್ವಿಜಯ್ ಸಿಂಗ್ ಅವರ ಅನ್ಯಾಯವನ್ನು ಸಹಿಸಿಕೊಂಡು ಸುಮ್ಮನೆ ಕೂರುವ ಜಾಯಮಾನ ನನ್ನದಲ್ಲ ಎಂದು ಜ್ಯೋತಿರಾದಿತ್ಯ ಸಿಂಧಿಯಾ ಗುಡುಗಿದರು. ತಾವು ಏನು ಬೇಕಾದರೂ ಮಾಡಿದರೆ ನಡೆಯುತ್ತೆ ಎಂಬ ಅಹಂಕಾರದಲ್ಲಿರುವ ಕಮಲ್‌ನಾಥ್ ಹಾಗೂ ದಿಗ್ವಿಜಯ್ ಸಿಂಗ್ ಅವರಿಗೆ ನಾನು ಟೈಗರ್ ಜಿಂದಾ ಹೈ ಎಂಬ ಸಂದೇಶ ಕಳುಹಿಸಲು ಬಯಸುತ್ತೇನೆ ಎಂದು ಜ್ಯೋತಿರಾದಿತ್ಯ ಸಿಂಧಿಯಾ ಮಾರ್ಮಿಕವಾಗಿ ಹೇಳಿದರು. ರಾಜ್ಯದ ಸರ್ವಾಂಗೀಣ ಪ್ರಗತಿಯೇ ತಮ್ಮ ಗುರಿಯಾಗಿದ್ದು, ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ರಮಧ್ಯಪ್ರದೇಶ ಅಭಿವೃದ್ಧಿಯ ಹೊಸ ಪರ್ವವನ್ನು ಕಾಣಲಿದೆ ಎಂದು ಜ್ಯೋತಿರಾದಿತ್ಯ ಸಿಂಧಿಯಾ ಈ ವೇಳೆ ಭರವಸೆ ವ್ಯಕ್ತಪಡಿಸಿದರು.


from India & World News in Kannada | VK Polls https://ift.tt/3eW4nHK

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...