ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆಯ ಜೋರಾಗುತ್ತಿದೆ. ಡಿಸಿಎಂ ಲಕ್ಷ್ಮಣ ಸವದಿ ದೆಹಲಿ ಭೇಟಿ ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಈ ನಡುವೆ ಸಚಿವ ಆರ್. ಅಶೋಕ್ ಬಿಎಸ್ ಯಡಿಯೂರಪ್ಪ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಸಿಎಂ ಬಿಎಸ್ವೈ ಪರವಾಗಿ ಟ್ವೀಟ್ ಮಾಡುವ ಮೂಲಕ ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ. ಕಳೆದ ವರ್ಷದ ಪ್ರವಾಹ ಸಮಯದಲ್ಲಿ ಹಾಗೂ ಈಗಿನ ಕೋವಿಡ್-19 ಸೋಂಕು ಸನ್ನಿವೇಶದಲ್ಲಿ ಮುಖ್ಯಮಂತ್ರಿ ಬಿಎಸ್ವೈಯವರು ಶಕ್ತಿಮೀರಿ ಹಗಲಿರುಳು ದುಡಿದು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಹೀಗಿರುವಾಗ ನಾಯಕತ್ವ ಬದಲಾವಣೆಯ ಪ್ರಶ್ನೆ ಉದ್ಭವಿಸುವುದಿಲ್ಲ ಎಂದಿದ್ದಾರೆ. ಅಲ್ಲದೆ ರಾಜ್ಯದಲ್ಲಿ ಸಿಎಂ ಖುರ್ಚಿ ಖಾಲಿಯಿಲ್ಲ. ಮುಂದಿನ ಮೂರು ವರ್ಷಗಳ ಕಾಲ ಬಿ.ಎಸ್.ವೈ ರವರೇ ನಮ್ಮ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಹೇಳುವ ಮೂಲಕ ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ. ಬಿಎಸ್ವೈ ನಾಯಕತ್ವ ಬದಲಾವಣೆ ಆಗಲಿದೆ ಎಂಬ ಚರ್ಚೆ ನಡೆಯುತ್ತಿದ್ದರೂ ಬಹುತೇಕ ಸಚಿವರು ಬಿಎಸ್ವೈ ಜೊತೆಗೆ ಬಹಿರಂಗವಾಗಿ ನಿಂತಿರಲಿಲ್ಲ. ಮಾಧ್ಯಮಗಳಲ್ಲಿ ಈ ಕುರಿತಾಗಿ ಚರ್ಚೆ ನಡೆಯುತ್ತಿದ್ದರೂ ಗಟ್ಟಿ ಧ್ವನಿಯಲ್ಲಿ ಬಿಎಸ್ವೈ ಸಿಎಂ ಆಗಿ ಮೂರು ವರ್ಷಗಳ ಕಾಲ ಮುಂದುವರಿಯುತ್ತಾರೆ ಎಂದು ಯಾರೂ ಹೇಳುತ್ತಿಲ್ಲ. ಒಂದು ಹಂತದಲ್ಲಿ ಬಿಎಸ್ವೈ ಏಕಾಂಗಿಯಾಗುತ್ತಿದ್ದಾರೆ ಎಂದೇ ವ್ಯಾಖ್ಯಾನ ಮಾಡಲಾಗುತ್ತಿದೆ.
from India & World News in Kannada | VK Polls https://ift.tt/39Gvt3N