ಉಡುಪಿಯ ಪುತ್ತಿಗೆ ಮಠದ ಶ್ರೀಗಳಿಗೆ ಕೊರೊನಾ ಸೋಂಕು ದೃಢ!

ಉಡುಪಿ: ಕೊರೊನಾ ವೈರಸ್‌ ಇದೀಗ ಎಲ್ಲರನ್ನು ಬೆಂಬಿಡದೆ ಕಾಡುತ್ತಿದೆ. ಇದೀಗ ಉಡುಪಿಯ ಮಠಾಧೀಶರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಉಡುಪಿಯ ಪುತ್ತಿಗೆ ಮಠದ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಗಳಿಗೆ ಕೊರೊನಾ ಸೋಂಕು ತಗುಲಿದೆ. ಸದ್ಯ ಸ್ವಾಮೀಜಿಗೆ ಮಣಿಪಾಲದ ಕೆಎಂಸಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಶ್ರೀಗಳು ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ. ಕೊರೊನಾ ಸೋಂಕಿನ ಲಕ್ಷಣಗಳಾದ ಜ್ವರ ಹಾಗೂ ಶೀತ ಇದ್ದ ಹಿನ್ನೆಲೆ ಯತಿಗಳು ಕೊರೊನಾ ಪರೀಕ್ಷೆ ನಡೆಸಿದ್ದರು. ಈ ವೇಳೆ ಸೋಂಕು ಇರುವುದು ದೃಢಪಟ್ಟಿದೆ. ಸ್ವಾಮೀಜಿಯ ಜೊತೆ ಸಂಪರ್ಕ ಹೊಂದಿದವರನ್ನ ಕ್ವಾರಂಟೈನ್‌ನಲ್ಲಿ ಇಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಇನ್ನು ಸ್ವಾಮೀಜಿಗಳು ಶೀಘ್ರ ಗುಣಮುಖರಾಗುವಂತೆ ಭಕ್ತರು ಮಠದಲ್ಲಿ ವಿಶೇಷ ಪ್ರಾರ್ಥನೆ ಮಾಡುತ್ತಿದ್ದಾರೆ. ಕೊರೊನಾ ವಿರುದ್ಧದ ಹೋರಾಟಕ್ಕೆ ವಿವಿಧ ಮಠದ ಸ್ವಾಮೀಜಿಗಳು ಕರೆ ನೀಡಿದ್ದರು. ಈ ಮಧ್ಯೆಯೇ ಕೊರೊನಾ ವ್ಯಾಪಕವಾಗಿ ರಾಜ್ಯದಲ್ಲಿ ಹರಡುತ್ತಿದೆ. ಇತ್ತೀಚೆಗೆ ಶಿವಮೊಗ್ಗದ ಹೊನ್ನಾಳಿ ತಾಲೂಕು ರಾಂಪುರ ಹಾಲಸ್ವಾಮಿ ಮಠದ ಶ್ರೀ ಹಾಲಶಂಕರ ವಿಶ್ವಾರಾಧ್ಯ ಸ್ವಾಮೀಜಿ ಅವರು ಕೊರೊನಾ ಸೋಂಕಿನಿಂದ ಲಿಂಗೈಕ್ಯರಾಗಿದ್ದರು.


from India & World News in Kannada | VK Polls https://ift.tt/3eMrkwe

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...