ಡಿಕೆಶಿ ಪಟ್ಟಾಭಿಶೇಕ: ಒಗ್ಗಟ್ಟಿನ ಮಂತ್ರ ,ಕೇಡರ್‌ ಆಧಾರದಲ್ಲಿ ಪಕ್ಷ ಸಂಘಟನೆಗೆ ಸಂಕಲ್ಪ



ಕೊರೊನಾ ಅಬ್ಬರದ ನಡುವೆಯೂ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು. ಬೆಳಗ್ಗೆ 11 ಗಂಟೆಗೆ ಕೆಪಿಸಿಸಿ ನೂತನ ಕಚೇರಿಯಲ್ಲಿ ಕಾರ್ಯಕ್ರ ಆರಂಭವಾಯಿತು. ಆರಂಭದಲ್ಲಿ ಲಡಾಕ್‌ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಬಳಿಕ ಸಂವಿಧಾನದ ಪೀಠಿಕೆ ಓದು, ಕಾಂಗ್ರೆಸ್ ಪಕ್ಷದ ಪ್ರತಿಜ್ಞಾವಿಧಿ ಬೋಧನೆ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಕೊರೊನಾದ ಆತಂಕದ ನಡುವೆಯೂ ಈ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಲಾಯಿತು. ಕಾಂಗ್ರೆಸ್ ಶಾಸಕರು, ಮುಖಂಡರು ಹಾಗೂ ಹೊರ ರಾಜ್ಯಗಳ ಕಾಂಗ್ರೆಸ್ ನಾಯಕರುಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಕೊರೊನಾ ಕಾರಣದಿಂದ ಡಿಜಿಟಲ್‌ ಆಧಾರಿತ ಕಾರ್ಯಕ್ರಮಗಳು ಮುನ್ನೆಲೆಗೆ ಬಂದಿವೆ. ಈ ಸಂದರ್ಭವನ್ನು ಡಿಕೆಶಿ ಪದಗ್ರಹಣ ಕಾರ್ಯಕ್ರಮದಲ್ಲಿ ಉತ್ತಮ ರೀತಿಯಲ್ಲಿ ಬಳಸಿಕೊಳ್ಳಲಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಝೂಮ್ ಆಪ್‌ ಮೂಲಕ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲಾಗಿತ್ತು. ಸುಮಾರು 19 ಲಕ್ಷದ 600 ಜನರು ಲಾಗ್‌ಇನ್ ಆಗುವ ಮೂಲಕ ಕಾರ್ಯಕ್ರಮವನ್ನು ವೀಕ್ಷಣೆ ಮಾಡಿದ್ದಾರೆ ಎಂದು ಕೆಪಿಸಿಸಿ ತಿಳಿಸಿದೆ. ಸಾಮಾಜಿಕ ಜಾಲತಾಣಗಳು ಹಾಗೂ ಡಿಜಿಟಲ್ ಬಳಕೆಯಲ್ಲಿ ಹಿಂದಿದ್ದ ಕಾಂಗ್ರೆಸ್ ಈ ಬಾರಿ ಡಿಜಿಟಲ್ ತಂತ್ರಜ್ಞಾನವನ್ನು ಸಂಪೂರ್ಣವಾಗಿ ಬಳಸಿಕೊಂಡಿದೆ.

ಕಾಂಗ್ರೆಸ್ ಪಕ್ಷದಲ್ಲೂ ಬಿಜೆಪಿ ಮಾದರಿಯಲ್ಲಿ ಕೇಡರ್‌ಗಳನ್ನು ತಯಾರಿ ಮಾಡುವ ಚಿಂತನೆ ನಡೆದಿದೆ. ಕೇಡರ್‌ಗಳನ್ನು ತಯಾರಿಸಿ ಕೇರಳದ ಮಾದರಿಯಲ್ಲಿ ಪಕ್ಷ ಸಂಘಟನೆ ಮಾಡಲಾಗುವುದು ಎಂದು ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಪಕ್ಷವನ್ನು ಮಾಸ್ ಬೇಸ್ ಗಿಂದ ಕೇಡರ್ ಬೇಸ್ ಗೆ ಪರಿವರ್ತನೆ ಮಾಡಲಾಗುವುದು ಹಾಗೂ ಕೇರಳ ಮಾದರಿಯಲ್ಲಿ ಪಕ್ಷ ಸಂಘಟನೆ ನಡೆಸಿ ಬೂತ್ ಮಟ್ಟದಲ್ಲಿ ಪಕ್ಷ ಬಲವರ್ಧನೆಗೆ ಕೆಲಸ ಮಾಡುವ ಯೋಜನೆಯನ್ನು ಡಿಕೆ ಶಿವಕುಮಾರ್ ಹಾಕಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ಹೊಣೆಗಾರಿಕೆಯನ್ನು ನೀಡಲಾಗಿದೆ ಎಂಬ ಮಾಹಿತಿ ಇದೆ. ಪಕ್ಷದಲ್ಲಿ ಕೇಡರ್‌ ಬೇಸ್ ತಯಾರಿ ಮಾಡಲು ಸಕ್ರಿಯ ಭಾಗಿಯಾಗುವುದಾಗಿ ತಮ್ಮ ಭಾಷಣದಲ್ಲಿ ಸತೀಶ್ ಜಾರಕಿಹೊಳಿಯು ತಿಳಿಸಿದ್ದಾರೆ.

ಡಿಕೆ ಶಿವಕುಮಾರ್ ಅಧ್ಯಕ್ಷರಾದ ಬಳಿಕ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ತೀವ್ರಗೊಂಡಿದೆ ಎಂಬ ಮಾತಿದೆ. ಆದರೆ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ಎಲ್ಲಾ ನಾಯಕರು ಒಗ್ಗಟ್ಟಿನ ಮಂತ್ರವನ್ನು ಪಠಿಸಿದ್ದಾರೆ. ಆರಂಭಿಕ ಭಾಷಣದಲ್ಲಿ ಮಾತನಾಡಿದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ ವೇಣುಗೋಪಾಲ್‌ ಎಲ್ಲರನ್ನು ಜೊತೆಗೂಡಿಸಿಕೊಂಡು ಪಕ್ಷ ಸಂಘಟನೆ ಮಾಡಬೇಕು ಎಂದು ಕರೆ ನೀಡಿದರು. ಇನ್ನು ಕಾರ್ಯಕ್ರಮದ ಸಂದರ್ಭದಲ್ಲಿ ಪೋನ್ ಕರೆ ಮಾಡಿದ ರಾಹುಲ್ ಗಾಂಧಿಯೂ ಇದೇ ಸೂಚನೆಯನ್ನು ನೀಡಿದರು. ಇದಕ್ಕೆ ಉತ್ತರವಾಗಿ ಡಿಕೆಶಿ ಮಾತನಾಡುತ್ತಾ ಪಕ್ಷದಲ್ಲಿ ವ್ಯಕ್ತಿ ಪೂಜೆ ಬೇಡ ಪಕ್ಷ ಪೂಜೆ ಬೇಕಿದೆ ಎನ್ನುವ ಮೂಲಕ ಒಗ್ಗಟ್ಟಾಗಿ ಪಕ್ಷ ಸಂಘಟನೆ ಮಾಡೋಣ ಎಂದರು. ಒಟ್ಟಿನಲ್ಲಿ ಅದ್ದೂರಿ ಹಾಗೂ ವಿಭಿನ್ನ ಪದಗ್ರಹಣ ಕಾರ್ಯಕ್ರಮದ ಮೂಲಕ ಕಾಂಗ್ರೆಸ್ ತನ್ನ ಕಾರ್ಯಕರ್ತರಲ್ಲಿ ಹುಮ್ಮಸ್ಸು ಮೂಡಿಸುವ ಪ್ರಯತ್ನವನ್ನು ಮಾಡಿದೆ.



from India & World News in Kannada | VK Polls https://ift.tt/2Zz4HFI

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...