ಕಾಂಗ್ರೆಸ್ ವಿರುದ್ಧ ಮತ ಚಲಾಯಿಸಿ: ರಾಜಸ್ಥಾನ ಬಿಎಸ್‌ಪಿ ಶಾಸಕರಿಗೆ ಮಾಯಾವತಿ ಆದೇಶ!

ಲಕ್ನೋ: ರಾಜಸ್ಥಾನ ರಾಜಕೀಯ ಬಿಕ್ಕಟ್ಟಿನಲ್ಲಿ ಅಧಿಕೃತವಾಗಿ ಪ್ರವೇಶ ಮಾಡಿರುವ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಬಹುಜನ ಸಮಾಜ ಪಕ್ಷ() ಮುಖ್ಯಸ್ಥೆ , ಕಾಂಗ್ರೆಸ್‌ಗೆ ನಡುಕ ಹುಟ್ಟುವಿಸುವಂತ ನಿರ್ಧಾರ ಪ್ರಕಟಿಸಿದ್ದಾರೆ. ಮಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿಧಾನಸಭೆಯಲ್ಲಿ ಬಹುಮತ ಸಾಬೀತಿಗೆ ಮುಂದಾದರೆ, ಕಾಂಗ್ರೆಸ್ ವಿರುದ್ಧ ಮತ ಚಲಾಯಿಸುವಂತೆ ಮಾಯಾವತಿ ತನ್ನ 6 ಬಿಎಸ್‌ಪಿ ಶಾಸಕರಿಗೆ ಆದೇಶ ನೀಡಿದ್ದಾರೆ. ರಾಜಸ್ಥಾನ ವಿಧಾನಸಭೆಗೆ ಆಯ್ಕೆಯಾಗಿರುವ ಎಲ್ಲಾ ಬಿಎಸ್‌ಪಿ ಶಾಸಕರೂ ಕಾಂಗ್ರೆಸ್‌ ಸೇರಿದ್ದು, ಆದರೂ ತಾಂತ್ರಿಕವಾಗಿ ಈ ಆರೂ ಶಾಸಕರು ಇನ್ನೂ ಬಿಎಸ್‌ಪಿಯಲ್ಲೇ ಇದ್ದಾರೆ. ರಾಜ್ಯಸಭೆ ಚುನಾವಣೆ ಸಂದರ್ಭದಲ್ಲಿ ಈ 6 ಶಾಸಕರನ್ನು ಬಿಎಸ್‌ಪಿ ಶಾಸಕರೆಂದು ಪರಿಗಣಿಸುವಂತ ಚುನಾವಣಾ ಆಯೊಗಕ್ಕೆ ಮಾಯಾವತಿ ಮನವಿ ಮಾಡಿದ್ದರು. ಆದರೆ ಈ ವಿಷಯದಲ್ಲಿ ಮಧ್ಯಪ್ರವೇಶಿಸಲು ಚುನಾವಣಾ ಆಯೋಗ ನಿರಾಕರಿಸಿತ್ತು. ಇದೀಗ ಮತ್ತೆ ಈ ಆರೂ ಶಾಸಕರು ತಮ್ಮ ಪಕ್ಷದವರು ಎಂದು ಹೇಳಿರುವ ಮಾಯಾವತಿ, ಅದರಂತೆ ಬಹುಮತ ಪರೀಕ್ಷೆಯಲ್ಲಿ ಕಾಂಗ್ರೆಸ್‌ಗೆ ವಿರುದ್ಧವಾಗಿ ಮತ ಚಲಾಯಿಸುವಂತೆ ಹೇಳಿದ್ದಾರೆ. ಅಲ್ಲದೇ ತನ್ನ ಆರೂ ಶಾಸಕರಿಗೂ ವಿಪ್ ಜಾರಿ ಮಾಡಿರುವ ಬಿಎಸ್‌ಪಿ, ಸನದಲ್ಲಿ ಕಾಂಗ್ರೆಸ್ ವಿರುದ್ಧವಾಗಿ ಮತ ಚಲಾಯಿಸುವಂತೆ ಸ್ಪಷ್ಟ ಸಂದೇಶ ನೀಡಿದೆ. ಬಿಜೆಪಿ ಒಂದು ರಾಷ್ಟ್ರೀಯ ಪಕ್ಷವಾಗಿದ್ದು, ರಾಜ್ಯ ಮಟ್ಟದಲ್ಲಿ ಹೈಕಮಾಂಡ್ ಗಮನಕ್ಕೆ ತದೇ ಯಾವುದೇ ನಿರ್ಣಯ ಕೈಗೊಳ್ಳುವಂತಿಲ್ಲ ಎಂದು ಮಾಯಾವತಿ ಹೇಳಿದ್ದಾರೆ.


from India & World News in Kannada | VK Polls https://ift.tt/30TJHu0

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...