ಸಿಬ್ಬಂದಿ ಕಡಿತದ ಆದೇಶ: ಪಾಕ್‌ನಿಂದ ಸ್ವದೇಶಕ್ಕೆ ಮರಳಿದ ಭಾರತೀಯ ರಾಜತಾಂತ್ರಿಕ ಅಧಿಕಾರಿಗಳು!

ನವದೆಹಲಿ: ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಯ ಸಂಖ್ಯೆಯನ್ನು ಕಡಿತಗೊಳಿಸಿ ಆದೇಶ ಜಾರಿ ಮಾಡಿದೆ. ಅದರಂತೆ ಇಂದು(ಬುಧವಾರ) ಬೆಳಗ್ಗೆ ರಾಯಭಾರ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ಕೆಲವು ರಾಜತಾಂತ್ರಿಕ ಅಧಿಕಾರಿಗಳು ಹಾಗೂ ಅವರ ಕುಟುಂಬ ವರ್ಗ ಸ್ವದೇಶಕ್ಕೆ ಮರಳಿದೆ. ಅಟ್ಟಾರಿ-ವಾಘಾ ಗಡಿಯಿಂದ ಭಾರತಕ್ಕೆ ವಾಪಸ್ಸಾದ ರಾಜತಾಂತ್ರಿಕ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಗಡಿಯಿಂದ ಕರೆದೊಯ್ಯಲು ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿತ್ತು. ಭಾರತದ ರಾಜಧಾನಿ ನವದೆಹಲಿಯಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿಯ ಅಧಿಕಾರಿಗಳನ್ನು ಬೇಹುಗಾಋಇಕೆ ನಡೆಸುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿತ್ತು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಇಬ್ಬರು ಅಧಿಕಾರಿಗಳನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿತ್ತು. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಸಿಬ್ಬಂದಿಯ ಸಂಖ್ಯೆಯನ್ನು ಶೇ.50ರಷ್ಟು ಕಡಿತ ಮಾಡಲು ಭಾರತ ಸರ್ಕಾರ ನಿರ್ಧರಿಸಿತ್ತು. ಅಷ್ಟೇ ಅಲ್ಲದೇ ನವದೆಹಲಿಯಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿಯ ಸಿಬ್ಬಂದಿಯ ಸಂಖ್ಯೆಯನ್ನೂ ಶೇ.50ರಷ್ಟು ಕಡಿತ ಮಾಡುವಂತೆ ಪಾಕಿಸ್ತಾನಕ್ಕೆ ಭಾರತ ಸೂಚನೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.


from India & World News in Kannada | VK Polls https://ift.tt/2YLezwZ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...