ರಾಮ ಮಂದಿರ ಭೂಮಿ ಪೂಜೆಗೆ ಸಿಂಗಾರಗೊಂಡ ಅಯೋಧ್ಯೆ: ಬೀದಿ ಬೀದಿಯೂ ಈಗ ಕೇಸರಿಮಯ!

ಅಯೋಧ್ಯೆ: ಇದೇ ಆಗಸ್ಟ್ 5ರಂದು ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ಪ್ರಧಾನಿ ಮೋದಿ ಭವ್ಯ ರಾಮ ಮಂದಿರಕ್ಕೆ ನೆರವೇರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ನಗರ ಸಿಂಗಾರಗೊಂಡು ನಳನಳಿಸುತ್ತಿದೆ. ವಿಶೇಷವೆಂದರೆ ಇಡೀ ನಗರ ಕೇಸರಿಮಯವಾಗಿದ್ದು, ನಗರದ ಪ್ರಮುಖ ರಸ್ತೆಗಳು ಹಾಗೂ ಕಟ್ಟಡಗಳನ್ನು ಕೇಸರಿ ಬಣ್ಣದಲ್ಲಿ ಕಂಗೊಳಿಸುವಂತೆ ಮಾಡಲಾಗಿದೆ. ನಗರದ ಬಹುತೇಕ ಕಟ್ಟಡಗಳು ಕೇಸರಿ ಬಣ್ಣದಲ್ಲಿ ಮಿಂದೆದ್ದಿದ್ದು, ಕಡ್ಡಗಳ ಮೇಲೆ ದೇವಾನು ದೇವತೆಗಳ ವರ್ಣಚಿತ್ರ ಬಿಡಿಸಲಾಗಿದೆ. ಪ್ರಮುಖವಾಗಿ ಪ್ರಭು ಶ್ರೀರಾಮ, ಹನುಮಂತ , ಶಿವ, ಗಣೇಶ ಸೇರಿದಂತೆ ಪ್ರಮುಖ ದೇವಾನು ದೇವತೆಗಳು ಎಲ್ಲಾ ಕಟ್ಟಡಗಳ ಮೇಲೆ ರಾರಾಜಿಸುತ್ತಿದ್ದಾರೆ. ಇನ್ನು ರಾಮ ಜನ್ಮಭೂಮಿಯಲ್ಲಿ ಭೂಮಿ ಪೂಜೆಗೆ ಸಕಲ ಸಿದ್ಧತೆ ನಡೆಯುತ್ತಿದ್ದು, ಇಡೀ ಆವರಣಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಪ್ರಧಾನಿ ಮೋದಿ ಸೇರಿದಂತೆ ಸುಮಾರು 200 ಗಣ್ಯರು ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ವಿಶೇಷ. ಇದೇ ವೇಳೆ ಭೂಮಿ ಪೂಜೆಗೆ ಕೆಲವು ಅಪಸ್ವರಗಳೂ ಕೇಳಿ ಬಂದಿದ್ದು, ಕೊರೊನಾ ಸಮಯದಲ್ಲಿ ಭೂಮಿ ಪೂಜೆ ಏಕೆ ಎಂದು ಕೆಲವರು ಪ್ರಶ್ನಿಸುತ್ತಿದ್ದಾರೆ. ಈಗಾಗಲೇ ಭೂಮಿ ಪೂಜೆಗೆ ತಡೆ ಕೋರಿ ಅಲಹಾಬಾದ್ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಒಟ್ಟಿನಲ್ಲಿ ಎಲ್ಲಾ ವಿಘ್ನಗಳನ್ನು ಮೀರಿ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರಕ್ಕೆ ಭೂಮಿ ಪೂಜೆ ನೆರವೇರಲಿದ್ದು, ಇದಕ್ಕಾಗಿ ಇಡೀ ಅಯೋಧ್ಯೆ ನಗರ ಸಿಂಗಾರಗೊಂಡಿದೆ.


from India & World News in Kannada | VK Polls https://ift.tt/3f0tF6F

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...