ದೆಹಲಿ ವಿವಾದ: ಬಿಎಸ್‌ವೈ ಭೇಟಿಯಾಗಿ ಸವದಿ ನೀಡಿದ ಸ್ಪಷ್ಟನೆ ಏನು?

ಬೆಂಗಳೂರು: ಡಿಸಿಎಂ ದೆಹಲಿ ಭೇಟಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಉದ್ದೇಶ ಸವದಿ ದೆಹಲಿ ಭೇಟಿಯ ಹಿಂದೆ ಇದೆ ಎಂದೇ ಚರ್ಚೆಗಳು ನಡೆಯುತ್ತಿವೆ. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ದೆಹಲಿಯಿಂದ ವಾಪಸಾದ ಸವದಿ ಗುರುವಾರ ಬೆಳಗ್ಗೆ ಸಿಎಂ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಗುರುವಾರ ಬೆಳಗ್ಗೆ ಸಿಎಂ ಬಿಎಸ್‌ವೈ ಕಾವೇರಿ ನಿವಾಸಕ್ಕೆ ಆಗಮಿಸಿದ್ದ ಸವದಿ ಕೆಲಹೊತ್ತು ಬಿಎಸ್‌ವೈ ಜೊತೆಗೆ ಚರ್ಚೆ ನಡೆಸಿದರು. ದೆಹಲಿ ಭೇಟಿಯ ಸುತ್ತ ಹುಟ್ಟಿಕೊಂಡಿರುವ ಸುದ್ದಿಗಳಿಗೆ ಸ್ಪಷ್ಟನೆ ನೀಡಿದ್ದಾರೆ ಎಂಬ ಮಾಹಿತಿ ಇದೆ. ಲಕ್ಷ್ಮಣ ಸವದಿ ದೆಹಲಿಗೆ ತೆರಳುತ್ತಿದ್ದಂತೆ ಅವರ ಕ್ಷೇತ್ರದ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷ್ಮಣ ಸವದಿ ಮುಂದಿನ ಸಿಎಂ ಎಂದು ಅಭಿಯಾನ ನಡೆಸಿದ್ದರು. ಸಾಕಷ್ಟು ಮಂದಿ ಪೋಸ್ಟ್‌ಗಳನ್ನು ಹಾಕುವ ಮೂಲಕ ಬೆಂಬಲ ಸೂಚಿಸಿದ್ದರು. ಮಾಧ್ಯಮಗಳಲ್ಲೂ ಇದು ಭಾರೀ ಸುದ್ದಿಯಾಗಿತ್ತು. ಅದರಲ್ಲೂ ಬಿಎಸ್‌ ಯಡಿಯೂರಪ್ಪ ಸರ್ಕಾರದ ಒಂದು ವರ್ಷದ ಸಾಧನಾ ಸಮಾವೇಶದಲ್ಲಿ ಸವದಿ ಭಾಗಿಯಾಗಿರಲಿಲ್ಲ. ಇಬ್ಬರು ಡಿಸಿಎಂಗಳು ಭಾಷಣ ಮಾಡಿದರೂ ಸವದಿ ಕಾರ್ಯಕ್ರಮದಲ್ಲಿಕಾಣಿಸಿಕೊಂಡಿರಲಿಲ್ಲ. ಆದರೆ ಇದೇ ಸಮಯಕ್ಕೆ ದೆಹಲಿಗೆ ತೆರಳಿದ್ದು ಕೇಂದ್ರ ನಾಯಕರನ್ನು ಭೇಟಿಯಾಗಿದ್ದರು. ಜೊತೆಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಈ ಎಲ್ಲಾ ಹಿನ್ನೆಲೆಯಲ್ಲಿ ಗುರುವಾರ ಬಿಎಸ್‌ ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿದ ಸವದಿ ಅವರ ಜೊತೆಗೆ ಮಾತುಕತೆ ನಡೆಸಿದರು.


from India & World News in Kannada | VK Polls https://ift.tt/3fcXilx

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...