ಸಹಕಾರ ಇಲಾಖೆಯ ಸಾಧನೆಗಳ ಕಿರುಹೊತ್ತಿಗೆ ಬಿಡುಗಡೆಗೊಳಿಸಿದ ಬಿ ಎಸ್ ವೈ

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಒಂದು ವರ್ಷ ಭರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಸಹಕಾರ ಇಲಾಖೆ ವತಿಯಿಂದ “ಸಹಕಾರದ ಪ್ರಗತಿ – 2020” ಸಾಧನೆಗಳ ಕಿರುಹೊತ್ತಿಗೆಯನ್ನು ಮುಖ್ಯಮಂತ್ರಿ ನಿವಾಸ ಕಾವೇರಿಯಲ್ಲಿ ಭಾನುವಾರ ಬಿಡುಗಡೆಗೊಳಿಸಿದರು. ಇದೇ ವೇಳೆ ಮಾತನಾಡಿದ ಅವರು ಮುಂದಿನ ವರ್ಷದ ಗುರಿ 30 ಲಕ್ಷ ರೈತರಿಗೆ 20 ಸಾವಿರ ಕೋಟಿ ರೂಪಾಯಿ ಕೃಷಿ ಸಾಲವನ್ನು ವಿತರಣೆ ಮಾಡಲು ಸಿದ್ಧತೆ ಮಾಡಿಕೊಳ್ಳಲು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರಿಗೆ ಈ ಸಂದರ್ಭದಲ್ಲಿ ಸೂಚಿಸಿದರು. ರೈತರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಿ ಪ್ರಸಕ್ತ ಸಾಲಿನಲ್ಲಿ ರೈತರಿಗೆ 14500 ಕೋಟಿ ರೂಪಾಯಿ ಕೃಷಿ ಸಾಲ ನೀಡುವ ಗುರಿ ಇದೆ. ಈಗಾಗಲೇ 8,50,000 ರೈತರಿಗೆ ರೂ.5,600 ಕೋಟಿ ಕೃಷಿ ಸಾಲ ವಿತರಣೆ ಮಾಡಲಾಗಿದೆ. ಯಾವುದೇ ಕಾರಣಕ್ಕೂ ರೈತರಿಗೆ ಕೃಷಿ ಚಟುವಟಿಕೆಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳಾದ ಅಶ್ವಥ್ ನಾರಾಯಣ್, ಗೃಹ ಸಚಿವರಾದ ಬಸವರಾಜ್ ಬೊಮ್ಮಾಯಿ, ಕಂದಾಯ ಸಚಿವರಾದ ಆರ್. ಅಶೋಕ್ ಅವರು ಉಪಸ್ಥಿತರಿದ್ದರು. ಬಿಎಸ್‌ವೈಯಿಂದ ಶ್ಲಾಘನೆ ಮುಖ್ಯಮಂತ್ರಿಗಳ ಒಂದು ವರ್ಷದ ಸಾಧನೆ ಜೊತೆಗೆ ನಾನು ನಮ್ಮ ಸಹಕಾರ ಇಲಾಖೆಯಿಂದ 3 ತಿಂಗಳ ಅವಧಿಗೆ ಏನು ಸಾಧನೆ ಮಾಡಿದ್ದೇನೆ ಎಂಬುದರ ಕಿರುಹೊತ್ತಿಗೆಯನ್ನು ಹೊರತಂದಿದ್ದು, ಅದನ್ನು ಮುಖ್ಯಮಂತ್ರಿಗಳು ಬಿಡುಗಡೆಗೊಳಿಸಿದ್ದಾರೆ. ಅಲ್ಲದೆ, ಸಚಿವನಾಗಿ ನಾನು ನಿರ್ವಹಿಸಿದ ಜವಾಬ್ದಾರಿ ಬಗ್ಗೆ ಮುಖ್ಯಮಂತ್ರಿಗಳು ಮೆಚ್ಚುಗೆ ಸೂಚಿಸಿದ್ದಾರೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಸುದ್ದಿಗಾರರಿಗೆ ತಿಳಿಸಿದರು. ನನ್ನ ಕಾರ್ಯವೈಖರಿ ಬಗ್ಗೆ ಸಹ ಮಾನ್ಯ ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಮುಂದೂ ಸಹ ಇದೇ ಮಾದರಿಯಲ್ಲಿ ಕಾರ್ಯನಿರ್ವಹಣೆ ಮಾಡಿ ಎಂದು ಮುಖ್ಯಮಂತ್ರಿಗಳು ಸಲಹೆ ಹಾಗೂ ಮಾರ್ಗದರ್ಶನ ಮಾಡಿದ್ದಾರೆ ಎಂದು ಸೋಮಶೇಖರ್ ತಿಳಿಸಿದರು. ನಾನು ಈಗಾಗಲೇ 25 ಜಿಲ್ಲೆಗಳಿಗೆ ಭೇಟಿ ನೀಡಿ ಸ್ಥಿತಿಗತಿಗಳನ್ನು ಅರಿತಿದ್ದೇನೆ. ಪ್ರತಿ ಭೇಟಿ ವೇಳೆಯೂ ರೈತರ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ. ಪ್ರಸಕ್ತ ಬಾರಿ ರೈತರಿಗೆ ಮಧ್ಯಮಾವಧಿ, ಅಲ್ಪಾವಧಿ ಹಾಗೂ ದೀರ್ಘಾವಧಿ ಕೃಷಿ ಸಾಲವಾಗಿ 14500 ಕೋಟಿ ರೂಪಾಯಿ ಸಾಲ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಈ ನಿಟ್ಟಿನಲ್ಲಿ ಚಾಲನೆ ನೀಡಲಾಗಿದ್ದು, ಈಗಾಗಲೇ 8,50,000 ರೈತರಿಗೆ ರೂ.5,600 ಕೋಟಿ ಕೃಷಿ ಸಾಲ ವಿತರಣೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.


from India & World News in Kannada | VK Polls https://ift.tt/3eW0mlK

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...