ಡಿ ಕೆ ರವಿ ಪ್ರಕರಣದಂತೆ ಕೋವಿಡ್‌ ಭ್ರಷ್ಟಾಚಾರವೂ ತನಿಖೆಯಾಗಲಿ, ಖಂಡ್ರೆ ಆಗ್ರಹ

ಬೆಂಗಳೂರು: ಐಎಸ್‌ಎಸ್ ಅಧಿಕಾರಿ ಡಿ.ಕೆ ರವಿ ಆತ್ಮಹತ್ಯೆ ಪ್ರಕರಣದ ತನಿಖೆಯಂತೆ ಕೋವಿಡ್‌ ಭ್ರಷ್ಟಾಚಾರದ ತನಿಖೆಯೂ ನಡೆಯಲಿ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಆಗ್ರಹಿಸಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಬಿಜೆಪಿ ಸರ್ಕಾರ ಹೇಳುವಂತೆ ಕೋವಿಡ್ ಉಪಕರಣ ಖರೀದಿಯಲ್ಲಿ ಹಗರಣವೇ ಆಗಿಲ್ವೇ ?? ಹಾಗಿದ್ರೆ ತನಿಖೆಗೆ ಹೆದುರುವುದೇಕೆ? ಎಂದು ಪ್ರಶ್ನಿಸಿದ್ದಾರೆ. ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಾಗ ಕೆ ಜೆ ಜಾರ್ಜ್ ವಿರುದ್ದ ಇದೇ ಬಿಜೆಪಿ ನಾಯಕರು ಅನಗತ್ಯ ಆರೋಪ ಮಾಡಿದ್ರು. ಆ ಸಂದರ್ಭದಲ್ಲಿ ನಮ್ಮ ಸರ್ಕಾರ ತನಿಖೆ ಮಾಡಿರಲಿಲ್ಲವೇ? ಎಂದಿದ್ದಾರೆ. ಐಎಎಸ್‌ ಅಧಿಕಾರಿ ಡಿ ಕೆ ರವಿ ಪ್ರಕರಣ ಸೇರಿದಂತೆ ಅದೇಷ್ಟೋ ಪ್ರಕರಣ ತನಿಖೆಗೆ ಮಾಡಲಿಲ್ಲವೇ? ಅದೇ ರೀತಿ ಕೋವಿಡ್‌ ಭ್ರಷ್ಟಾಚರದ ಹಗರಣ ಹಾಲಿ ನ್ಯಾಯಾಧಿಶರಿಂದ ತನಿಖೆಯಾಗಲಿ. ಸತ್ಯ ಹೊರಬರಲಿ ಎಂದು ಈಶ್ವರ್‌ ಖಂಡ್ರೆ ಆಗ್ರಹಿಸಿದ್ದಾರೆ. ಕೋವಿಡ್‌ ಚಿಕಿತ್ಸಾ ಉಪಕರಣಗಳ ಖರೀದಿಯಲ್ಲಿ ಸುಮಾರು ಎರಡು ಸಾವಿರ ಕೋಟಿ ಹಗರಣ ನಡೆದಿದೆ ಎಂದು ವಿರೋಧ ಪಕ್ಷ ಕಾಂಗ್ರೆಸ್ ಆರೋಪಿಸಿದೆ. ಹಗರಣದ ಕುರಿತಾಗಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.


from India & World News in Kannada | VK Polls https://ift.tt/3fXLWmy

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...