ಬೆಂಗಳೂರು: ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಜಾರಿಯಲ್ಲಿದ್ದ ಸಂಪೂರ್ಣ ಬುಧವಾರ ಬೆಳಗ್ಗೆ 5 ಗಂಟೆಗೆ ಮುಕ್ತಾಯಗೊಂಡಿದೆ. ಲಾಕ್‌ಡೌನ್ ತೆರವುಗೊಂಡ ಪರಿಣಾಮ ಬೆಂಗಳೂರು ನಗರ ಮತ್ತೆ ಸಹಜ ಸ್ಥಿತಿಯತ್ತ ಮರಳುತ್ತಿದೆ. ಲಾಕ್‌ಡೌನ್ ಅವಧಿಯಲ್ಲಿ ನಗರದ ಪ್ರಮುಖ ರಸ್ತೆಗಳನ್ನು ಮುಚ್ಚಲಾಗಿತ್ತು. ರಸ್ತೆಗಳಲ್ಲಿ ಬ್ಯಾರಿಕೇಡ್ ಅಳವಡಿಸುವ ಮೂಲಕ ಜನ ಹಾಗೂ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಬೆಳಗ್ಗೆ 7 ರಿಂದ ಮಧ್ಯಾಹ್ಮ 12 ಗಂಟೆಯವರೆಗೆ ಅಗತ್ಯ ಸಾಮಗ್ರಿಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಮಧ್ಯಾಹ್ಮದ ಬಳಿಕ ಬಿಗಿ ಕ್ರಮಗಳನ್ನು ಕೈಗೊಳ್ಳುವ ಮೂಲಕ ಜನಸಂಚಾರಕ್ಕೆ ನಿರ್ಬಂಧ ವಿಧಿಸಲಾಗುತ್ತಿತ್ತು. ಆದರೆ ಒಂದು ವಾರದ ಲಾಕ್‌ಡೌನ್ ನಿರೀಕ್ಷಿತ ಫಲಿತಾಂಶವನ್ನು ನೀಡಲಿಲ್ಲ. ಲಾಕ್‌ಡೌನ್ ಅವಧಿಯಲ್ಲಿ ಬೆಂಗಳೂರಿನಲ್ಲಿ 15,241 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ನಗರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 34,943 ಕ್ಕೆ ಏರಿಕೆಯಾಗಿದೆ. ಇದೀಗ ಲಾಕ್‌ಡೌನ್ ತೆರವುಗೊಳಿಸಲಾಗಿದ್ದು ಬೆಂಗಳೂರಿನಲ್ಲಿ ಜನಜೀವನ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿವೆ. ರಸ್ತೆಗಳಲ್ಲಿ ಜನರ ಹಾಗೂ ವಾಹನ ಓಡಾಟ ಹೆಚ್ಚಾಗುತ್ತಿದೆ. ಲಾಕ್‌ಡೌನ್ ತೆರವುಗೊಂಡರೂ ಕಟ್ಟುನಿಟ್ಟಿನ ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯವಾಗಿ ಧರಿಸುವಂತೆ ಸರ್ಕಾರ ಸೂಚನೆ ನೀಡಿದೆ.
from India & World News in Kannada | VK Polls https://ift.tt/32GsHKh