ಬಿಜೆಪಿಯಲ್ಲಿ ಚುರುಕುಗೊಂಡ ನಾಯಕತ್ವ ಬದಲಾವಣೆ ಚರ್ಚೆ, ಲಕ್ಷ್ಮಣ ಸವದಿ ದೆಹಲಿಯಾತ್ರೆ ಗುಟ್ಟೇನು?

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಚುರುಕುಗೊಳ್ಳುತ್ತಿರುವ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ದೆಹಲಿ ಯಾತ್ರೆ ಹಲವಾರು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ. ಬಿಎಸ್‌ ಯಡಿಯೂರಪ್ಪ ಒಂದು ವರ್ಷದ ಸಾಧನೆ ಸಮಾರಂಭದ ದಿನದಂದೇ ಸವದಿ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌ ಹಾಗೂ ಇತರ ಕೇಂದ್ರ ನಾಯಕರುಗಳನ್ನು ಭೇಟಿ ಮಾಡಿದ್ದು ಕುತೂಹಲ ಕೆರಳಿಸಿದೆ. ಕಾಂಗ್ರೆಸ್-ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಪತನದ ಬಳಿಕ ರಚನೆಯಾದ ಬಿ.ಎಸ್‌ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಇದೀಗ ಒಂದು ವರ್ಷ ತುಂಬಿದೆ. ವರ್ಷ ತುಂಬುತ್ತಿದ್ದಂತೆ ನಾಯಕತ್ವ ಬದಲಾವಣೆಯ ಚರ್ಚೆಗಳು ಆರಂಭಗೊಂಡಿದೆ. ವಯಸ್ಸು ಹಾಗೂ ಇನ್ನಿತರ ಕಾರಣ ನೀಡಿ ಬಿಎಸ್‌ವೈ ಅಧಿಕಾರವನ್ನು ಬೇರೆಯವರಿಗೆ ಹಸ್ತಾಂತರ ಮಾಡಬೇಕು ಎಂಬ ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಸಂಪುಟ ವಿಸ್ತರಣೆಯ ಗೊಂದಲ, ಸಚಿವಕಾಂಕ್ಷಿಗಳ ಬಂಡಾಯ, ನಿಗಮ ಮಂಡಳಿ ರಗಳೆ ಬಿಎಸ್‌ವೈ ಪಾಲಿಗೆ ಹೊಸ ತಲೆನೋವು ಉಂಟು ಮಾಡಿದೆ. ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂಬ ಚರ್ಚೆಗಳು ಚಾಲ್ತಿಯಲ್ಲಿವೆ. ಇವೆಲ್ಲವನ್ನು ಮುಂದಿಟ್ಟುಕೊಂಡು ಬಿಎಸ್‌ವೈ ಅವರಿಂದ ಅಧಿಕಾರವನ್ನು ಬೇರೆಯವರಿಗೆ ಹಸ್ತಾಂತರ ಮಾಡುವ ಯೋಚನೆ ವರಿಷ್ಠರಿಗಿದೆ ಎಂದು ಹೇಳಲಾಗುತ್ತಿದೆ. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ದೆಹಲಿ ಭೇಟಿ ಸಹಜವಾಗಿ ಕುತೂಹಲವನ್ನು ಕೆರಳಿಸಿದೆ. ಅದಲ್ಲೂ ಬಿಜೆಪಿ ಪಾಲಿಗೆ ಮತ್ತೊಂದು ಶಕ್ತಿ ಕೇಂದ್ರವಾಗಿರುವ ಬಿ.ಎಲ್‌ ಸಂತೋಷ್‌ ಅವರ ಭೇಟಿ ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ. ಆದರೆ ಇದು ಸಹಜ ಭೇಟಿ ಎನ್ನುತ್ತಿದ್ದಾರೆ ಲಕ್ಷ್ಮಣ ಸವದಿ.


from India & World News in Kannada | VK Polls https://ift.tt/2X3PQCW

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...