ಹೌಸ್ ಬುಲಾವೋ: 'ರಾಜ'ನ ಆ'ಸ್ಥಾನ'ದಲ್ಲಿ ಅಶೋಕ್ ಗೆಹ್ಲೋಟ್ ಬೆಂಬಲಿಗರ ಕೂಗಾಟ ಜೋರು!

ಜೈಪುರ್: ರೋಚಕ ತಿರುವು ಪಡೆದುಕೊಂಡಿದ್ದು, ವಿಧಾನಸಭೆಯಲ್ಲಿ ಬಹುಮತ ಸಾಬೀತಿಗೆ ಮುಖ್ಯಮಂತ್ರಿ ತಂಡ ಪಟ್ಟು ಬಿಗಿಗೊಳಿಸಿದೆ. ಈ ಕೂಡಲೇ ವಿಧಾನಸಭೆ ಕರೆಯಬೇಕೆಂದು ಆಗ್ರಹಿಸಿ, ರಾಜಭವನದ ಮುಂದೆ ಅಶೋಕ್ ಗೆಹ್ಲೋಟ್ ಬೆಂಬಲಿಗ ಶಾಸಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೌಸ್ ಬುಲಾವೋ(ಅಧಿವೇಶನ ಕರೆಯಿರಿ) ಎಂದು ರಾಜ್ಯಪಾಲರನ್ನು ಉದ್ದೇಶಿಸಿ ಘೋಷಣೆ ಕೂಗುತ್ತಿರುವ ಅಶೋಕ್ ಗೆಹ್ಲೋಟ್ ಬೆಂಬಲಿಗರು, ಕೇಂದ್ರದ ಒತ್ತಡದಿಂದಾಗಿ ರಾಜ್ಯಪಾಲರು ವಿಶೇಷ ಅಧಿವೇಶನ ಕರೆಯಲು ಹಿಂದೇಟು ಹಾಕುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ರಾಜಭವನದ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿರುವ ಗೆಹ್ಲೋಟ್ ಬಣ, ಈ ಕೂಡಲೇ ವಿಶೇಷ ಅಧಿವೇಶನಕ್ಕೆ ಒತ್ತಾಯಿಸುತ್ತಿದೆ. ಆದರೆ ಇದುವರೆಗೂ ರಾಜ್ಯಪಾಲರಿಂದ ಯಾವುದೇ ಆಶ್ವಾಸನೆ ಬರದಿರುವುದು ಬಿಕ್ಕಟ್ಟನ್ನು ಮತ್ತಷ್ಟು ಉಲ್ಬಣಗೊಳಿಸಿದೆ. ಸಚಿನ್ ಪೈಲಟ್ ಅನರ್ಹತೆ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜಸ್ಥಾನ ಹೈಕೋರ್ಟ್ ಆದೇಶಿಸಿದ ಬೆನ್ನಲ್ಲೇ, ಗೆಹ್ಲೋಟ್ ಬಣ ಹೋಟೆಲ್‌ನಿಂದ ನೇರವಾಗಿ ಬಸ್ಸಿನ ಮೂಲಕ ರಾಜಭವನಕ್ಕೆ ಆಗಮಿಸಿ ವಿಶೇಷ ವಿಧಾನಸಭೆ ಕರೆಯುವಂತೆ ಒತ್ತಾಯಿಸುತ್ತಿದೆ.


from India & World News in Kannada | VK Polls https://ift.tt/39mInnt

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...