ಕೋವಿಡ್‌ ಚಿಕಿತ್ಸೆ: 2 ವಾರದೊಳಗೆ ಶಿವಾಜಿನಗರದ ಬ್ರಾಡ್ ವೇ ಆಸ್ಪತ್ರೆ ಕಾರ್ಯಾರಂಭ

ಬೆಂಗಳೂರು: ಇನ್ನು ಎರಡು ವಾರಗಳ ಒಳಗಾಗಿ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆಗೊಂಡಿರುವ ಶಿವಾಜಿನಗರದ ಬ್ರಾಡ್‌ ವೇ ಆಸ್ಪತ್ರೆ ಕಾರ್ಯಾರಂಭ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್‌ ತಿಳಿಸಿದ್ದಾರೆ. ಕೋವಿಡ್‌ ಸೋಂಕಿತರಿಗೆ ಚಿಕಿತ್ಸೆ ನೀಡುವ ಉದ್ದೇಶದಿಂದ ಶಿವಾಜಿನಗರದ ಬ್ರಾಡ್ ವೇ ಆಸ್ಪತ್ರೆಯನ್ನು 200 ಹಾಸಿಗೆಗಳ ಕೋವಿಡ್ ಆಸ್ಪತ್ರೆಯಾಗಿ ಸಜ್ಜುಗೊಲಿಸಲಾಗಿದೆ. ಇದರ ಸಮರ್ಪಕ ನಿರ್ವಹಣೆಗೆ ಅಗತ್ಯವಿರುವ ವೈದ್ಯರು, ನರ್ಸ್ ಪಾರಾ ಮೆಡಿಕಲ್ ಮತ್ತು ಇತರೆ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು ಇನ್ನು 2 ವಾರದೊಳಗೆ ಕಾರ್ಯಾರಂಭ ಮಾಡಲಿದೆ ಎಂದು ಸಚಿವರು ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಅರಂಭದಲ್ಲಿ ಹೈ ಫ್ಲೋ ಆಕ್ಸಿಜೆನ್ ಹೊಂದಿರುವ 180 ಹಾಸಿಗೆಗಳ ಸೌಕರ್ಯ ಒದಗಿಸಲಾಗುತ್ತಿದ್ದು, ಅಗತ್ಯವಿದ್ದಲ್ಲಿ ವೆಂಟಿಲೇಟರ್ ಅಳವಡಿಸುವ ವ್ಯವಸ್ಥೆ ಹೊಂದಿರುತ್ತದೆ. 30 ವೆಂಟಿಲೇಟರ್ ಒದಗಿಸಲಾಗುತ್ತಿದ್ದು, ನ್ಯೂರೋ ಸರ್ಜರಿ ಓಟಿ, ಕಾರ್ಡಿಯೋ ಓಟಿ, ಸಿಟಿ ಸ್ಕ್ಯಾನ್ ಸೌಲಭ್ಯವನ್ನು ಈ ಆಸ್ಪತ್ರೆ ಒಳಗೊಂಡಿರುತ್ತದೆ. ಆಸ್ಪತ್ರೆಗೆ ಅಗತ್ಯವಿರುವ 30 ಕೋಟಿ ವೆಚ್ಚದ ಮೂಲಸೌಕರ್ಯವನ್ನು ಪ್ರತಿಷ್ಠಿತ ಇನ್ಫೋಸಿಸ್ ಫೌಂಡೇಷನ್ ಒದಗಿಸಿದೆ. ಮೂಲಸೌಕರ್ಯ ಒದಗಿಸಲು ನೆರವು ನೀಡಿರುವ ಸುಧಾಮೂರ್ತಿ ಮತ್ತು ಇನ್ಫೋಸಿಸ್ ಪ್ರತಿಷ್ಠಾನಕ್ಕೆ ಸರ್ಕಾರದ ಮತ್ತು ಜನತೆಯ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಸಚಿವ ಕೆ. ಸುಧಾಕರ್‌ ಟ್ವೀಟ್‌ ಮಾಡಿದ್ದಾರೆ.


from India & World News in Kannada | VK Polls https://ift.tt/3gmn8Vw

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...