ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ ಆಯ್ತು.. ಈಗ ಜಾರ್ಖಂಡ್‌ ಸರ್ಕಾರದಲ್ಲೂ ಬಂಡಾಯ ಶುರು..!

ಜಾರ್ಖಂಡ್: ಕರ್ನಾಟಕದಲ್ಲಿ ಜೆಡಿಎಸ್ ಕಾಂಗ್ರೆಸ್‌ ನೇತೃತ್ವದ ಮೈತ್ರಿ ಸರ್ಕಾರ ಉರುಳಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದು ಒಂದು ವರ್ಷ ಆಗಿದೆಯಷ್ಟೇ. ಅತ್ತ ಮಧ್ಯಪ್ರದೇಶದಲ್ಲೂ ಸರ್ಕಾರ ಬಿದ್ದು ಬಿಜೆಪಿ ಆಡಳಿತಕ್ಕೆ ಬಂದಿದೆ. ಈ ಮಧ್ಯೆ ರಾಜಸ್ಥಾನದಲ್ಲೂ ಕಾಂಗ್ರೆಸ್‌ ಸರ್ಕಾರಕ್ಕೆ ತನ್ನ ಕುರ್ಚಿಯ ಉಳಿವಿನ ಬಗ್ಗೆ ಅಭದ್ರತೆ ಹೊಂದಿರುವ ಮಧ್ಯೆಯೇ ಇತ್ತ ಜಾರ್ಖಂಡನಲ್ಲೂ ಕೂಡ ಸರ್ಕಾರದ ಬುಡ ಅಲುಗಾಡಲು ಶುರುವಾಗಿದೆ. ಮುಕ್ತಿ ಮೋರ್ಚಾ ಪಕ್ಷ ಕಾಂಗ್ರೆಸ್‌ನ ಬೆಂಬಲದೊಂದಿಗೆ ಸರ್ಕಾರ ರಚಿಸಿದ್ದು, ಇದೀಗ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಕಾರ್ಯವೈಖರಿ ಬಗ್ಗೆ ಕಾಂಗ್ರೆಸ್‌ನ ಶಾಸಕರು ಅಸಮಾಧಾನಗೊಂಡಿದ್ದಾರೆ. ಜಾರ್ಖಂಡ್‌ನಲ್ಲಿ ಜಾರ್ಖಂಡ್ ಮುಕ್ತಿ ಪಕ್ಷ ಆಡಳಿತಕ್ಕೆ ಬರಲು ಕಾಂಗ್ರೆಸ್‌ನ ಹದಿನೈದು ಶಾಸಕರು ಪ್ರಮುಖ ಪಾತ್ರ ವಹಿಸಿದ್ದರು. ಅವರ ಬೆಂಬಲದೊಂದಿಗೆ ಸರ್ಕಾರ ರಚನೆ ಮಾಡಲಾಗಿತ್ತು. ಆದರೆ ಇದೀಗ ಮುಖ್ಯಮಂತ್ರಿ ಹೇಮಂತ್ ಸೊರೆನ್ ನೇತೃತ್ವದ ರಾಜ್ಯ ಸರ್ಕಾರ ಕಾಂಗ್ರೆಸ್‌ ಪಕ್ಷದ 15 ಸಚಿವರುಗಳನ್ನು ಕಡೆಗಣನೆ ಮಾಡುತ್ತಿದೆ ಎಂದು ಬಹಿರಂಗವಾಗಿ ಅಸಮಾಧಾನ ಹೊರ ಹಾಕಲು ಆರಂಭಿಸಿದ್ದಾರೆ. ಈ ಕುರಿತು ಮಾತನಾಡಿರುವ ಜಾರ್ಖಂಡ್ ಕಾಂಗ್ರೆಸ್‌ನ ಹಿರಿಯ ಶಾಸಕರೊಬ್ಬರು, ಹೇಮಂತ್ ಸೊರೆನ್ ಸರ್ಕಾರ ಈ ಹಿಂದೆ ಇದ್ದ ರಘುಬರ್ ದಾಸ್ ನೇತೃತ್ವದ ಬಿಜೆಪಿ ಸರ್ಕಾರದ ಪ್ರತಿಬಿಂಬದಂತೆ ಕಾಣುತ್ತಿದೆ. ಆಗ ನಮ್ಮನ್ನು ಕಡೆಗಣಿಸಿದಂತೆಯೇ ಈಗಲೂ ನಡೆಯುತ್ತಿದೆ. ಸಿಎಂ ಹಾಗೂ ಅವರ ನಾಲ್ವರು ಸಚಿವರು ಜನರ ಸಮಸ್ಯೆಗಳನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ. ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅತಂತ್ರಗೊಂಡಿರುವ ಬೆನ್ನಲ್ಲೇ ಅತ್ತ ಜಾರ್ಖಂಡ್‌ನಲ್ಲೂ ಕೂಡ ಅದೇ ರೀತಿಯ ಪರಿಸ್ಥಿತಿ ಉಂಟಾಗಿರೋದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಈ ಸಮಸ್ಯೆಯನ್ನು ಸಿಎಂ ಹೇಮಂತ್ ಸೊರೆನ್ ಹೇಗೆ ಬಗೆಹರಿಸುತ್ತಾರೆ ಅನ್ನೋದು ಕೂಡ ಪ್ರಶ್ನೆಯಾಗಿದೆ.


from India & World News in Kannada | VK Polls https://ift.tt/2EFZqpd

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...