ನಾಪತ್ತೆಯಾಗಿದ್ದ ಕೊರೊನಾ ರೋಗಿ ಆಸ್ಪತ್ರೆಯ ಹೊರಗೆ ಶವವಾಗಿ ಪತ್ತೆ!

ವಾರಾಣಸಿ: ಕೊರೊನಾ ವಾರ್ಡ್‌ನಿಂದ ನಾಪತ್ತೆಯಾಗಿದ್ದ ಕೋವಿಡ್ ರೋಗಿಯೋರ್ವ ಆಸ್ಪತ್ರೆಯ ಹೊರಾಂಗಣದಲ್ಲಿ ಶವವಾಗಿ ಪತ್ತೆಯಾದ ಘಟನೆ ಉತ್ತರಪ್ರದೇಶದ ವಾರಾಣಸಿಯಲ್ಲಿ ನಡೆದಿದೆ. ಇಲ್ಲಿನ ಸುಂದರ್‌ಲಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ, ಕಳೆದ ಭಾನುವಾರದಿಂದ ಕೊರೊನಾ ವಾರ್ಡ್‌ನಿಂದ ನಾಪತ್ತೆಯಾಗಿದ್ದ. ಆದರೆ ನಿನ್ನೆ(ಸೋಮವಾರ) ರಾತ್ರಿ ಈತನ ಮೃತದೇಹ ಆಸ್ಪತ್ರೆಯ ಹೊರಾಂಗಣದಲ್ಲಿ ಪತ್ತೆಯಾಗಿದ್ದು, ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಸಂಬಂಧಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯ ನಿರ್ಲಕ್ಷ್ಯವೇ ಕೊರೊನಾ ರೋಗಿಯ ಸಾವಿಗೆ ಕಾರಣ ಎಂದು ಸಂಬಂಧಿಕರು ಆರೋಪಿಸಿದ್ದು, ಆಡಳಿತ ಮಂಡಳಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಅಲ್ಲದೇ ಮೃತದೇಹದ ಮೇಲೆ ಗಾಯದ ಗುರುತುಗಳಿದ್ದು, ಇದು ಸಹಜ ಸಾವಲ್ಲ ಎಂಬ ಅನುಮಾನ ಮೂಡಿತ್ತಿದೆ ಎಂದೂ ಸಂಬಂಧಿಕರು ಗಂಭಿರ ಆರೋಪ ಮಾಡಿದ್ದಾರೆ. ಆದರೆ ಈ ಎಲ್ಲಾ ಆರೋಪಗಳನ್ನು ಅಲ್ಲಗಳೆದಿರುವ ಆಸ್ಪತ್ರೆ ಆಡಳಿತ ಮಂಡಳಿ, ಸುಕ್ತ ಚಿಕಿತ್ಸೆಗೂ ಮೊದಲೇ ಆಸ್ಪತ್ರೆಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದೇ ರೋಗಿಯ ಸಾವಿಗೆ ಕಾರಣ ಎಂದು ಸ್ಪಷ್ಟಪಡಿಸಿದೆ. ಆಸ್ಪತ್ರೆಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾದಲ್ಲಿ, ಕೊರೊನಾ ರೋಗಿ ಪೈಪ್ ಮೂಲಕ ಕಟ್ಟಡದಿಂದ ಕೆಳಗಿಳಿದು ಹೋಗುತ್ತಿರುವ ದೃಶ್ಯ ಸೆರೆಯಾಗಿದ್ದು, ಆತ ಚಿಕಿತ್ಸೆಯಿಂದ ತಪ್ಪಿಸಿಕೊಳ್ಳಲೆಂದೇ ಆಸ್ಪತ್ರೆಯಿಂದ ಓಡಿ ಹೋಗಿದ್ದಾನೆ ಎಂದು ಸಿಬ್ಬಂದಿ ಹೇಳಿದ್ದಾರೆ. ತಲೆಗೆ ಪೆಟ್ಟಾದ ಕಾರಣಕ್ಕೆ ಈ ವ್ಯಕ್ತಿ ಸುಂದರ್‌ಲಾಲ್ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ ನಂತ ಪರೀಕ್ಷೆಯಲ್ಲಿ ಕೊರೊನಾ ಪಾಸಿಟಿವ್ ಫಲಿತಾಂಶ ಬಂದ ಪರಿಣಾಮವಾಗಿ ಆತನನ್ನು ಕೊರೊನಾ ವಾರ್ಡ್‌ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.


from India & World News in Kannada | VK Polls https://ift.tt/31seaRv

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...