ಕೋವಿಡ್‌ ಭ್ರಷ್ಟಾಚಾರ: ಬಿಜೆಪಿಗೆ ತಿರುಗುಬಾಣವಾಗುತ್ತಾ ಲೀಗಲ್‌ ನೋಟಿಸ್‌!

ಬೆಂಗಳೂರು: ಕೋವಿಡ್‌ ಚಿಕಿತ್ಸಾ ಉಪಕರಣಗಳ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಮುಖಂಡರು ಮಾಡಿರುವ ಆರೋಪದ ಬೆನ್ನಲ್ಲೇ ವಿರೋಧ ಪಕ್ಷದ ನಾಯಕ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆ ಬಿಜೆಪಿ ನೋಟಿಸ್‌ ಜಾರಿಗೊಳಿಸಿದೆ. ಆದರೆ ಬಿಜೆಪಿ ನೀಡಿದ ಲೀಗಲ್‌ ನೋಟಿಸ್‌ ಇದೀಗ ಬಿಜೆಪಿಗೆ ತಿರುಗುಬಾಣವಾಗಿ ಪರಿಣಮಿಸಿದೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್‌ ಅವರ ಸೂಚನೆಯಂತೆ ವಕೀಲರ ಮೂಲಕ ಲೀಗಲ್‌ ನೋಟಿಸ್‌ ಜಾರಿಗೊಳಿಸಲಾಗಿತ್ತು. ಕೋವಿಡ್‌ ಭ್ರಷ್ಟಾಚಾರದ ಕುರಿತಾಗಿ ಸುಳ್ಳು ಆರೋಪ ಮಾಡಲಾಗಿದೆ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿತ್ತು. ಈ ವಿಚಾರವಾಗಿ ಇದೀಗ ಟ್ವೀಟ್‌ ಮಾಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ “ಅಕ್ರಮ ಪ್ರಶ್ನಿಸಿದ ನಮಗೆ ವಕೀಲರ ಮೂಲಕ ನೋಟೀಸ್ ಕೊಟ್ಟು ಬಿಜೆಪಿ ಪಕ್ಷ ನಮ್ಮ‌ ಕೆಲಸವನ್ನು ಸುಲಭ‌ ಮಾಡಿದೆ ಎಂದಿದ್ದಾರೆ. ನಾವೇ ನ್ಯಾಯಾಲಯದ ಮೆಟ್ಟಿಲು ಹತ್ತಬೇಕೆಂದಿದ್ದೆವು. ನಮಗೆ ನೀಡದ ದಾಖಲೆಗಳನ್ನು ನ್ಯಾಯಾಲಯಕ್ಕೆ ನೀಡಲೇ ಬೇಕಲ್ಲಾ? ಕೋರ್ಟ್ ನಲ್ಲಿಯಾದರೂ ನಮ್ಮನ್ನು ಎದುರಿಸಲೇ ಬೇಕಲ್ಲಾ? ಎಂದು ಟ್ವೀಟ್ ಮಾಡಿದ್ದಾರೆ. ಬಿಜೆಪಿ ಲೀಗಲ್‌ ನೋಟಿಸ್‌ ಜಾರಿಗೊಳಿಸಿದ್ದರೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಸೇರಿದಂತೆ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದರು.


from India & World News in Kannada | VK Polls https://ift.tt/319CPJb

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...