'ಸಿದ್ದರಾಮಯ್ಯ ಅವರು ಶೀಘ್ರ ಗುಣಮುಖರಾಗಿ ಮತ್ತೆ ಕೆಲಸ ಕಾರ್ಯಗಳಲ್ಲಿ ತೊಡಗಿಕೊಳ್ಳಲಿ': ಸಿಎಂ ಹಾರೈಕೆ

ಬೆಂಗಳೂರು: ಮಾಜಿ ಸಿಎಂ ಅವರಿಗೆ ಪಾಸಿಟಿವ್ ದೃಢಪಟ್ಟಿರುವುದರಿಂದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂತ್ರನಾಳದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ನಿನ್ನೆ ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದದ್ರು. ಈ ವೇಳೆ ಅವರನ್ನು ಕೊರೊನಾ ಪರೀಕ್ಷೆಗೂ ಒಳಪಡಿಸಲಾಗಿತ್ತು. ಇಂದು ಬೆಳಗ್ಗೆ ಬಂದ ಕೊರೊನಾ ರಿಪೋರ್ಟ್‌ನಲ್ಲಿ ಸಿದ್ದರಾಮಯ್ಯ ಅವರಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು ಹೀಗಾಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿರುವುದರಿಂದ ಸಹಜವಾಗಿಯೇ ಎಲ್ಲಾ ರಾಜಕಾರಣಿಗಳಲ್ಲಿ ಆತಂಕ ಉಂಟಾಗಿದ್ದು, ಅವರು ಶೀಘ್ರ ಗುಣಮುಖರಾಗುವಂತೆ ಹಾರೈಸುತ್ತಿದ್ದಾರೆ. ಮುಖ್ಯಮಂತ್ರಿ ಬಿಎಸ್‌ ಅವರು ಕೂಡ ಸಿದ್ದರಾಮಯ್ಯ ಅವರು ಆದಷ್ಟು ಬೇಗ ಗುಣಮುಖರಾಗಿ ಹೊರ ಬರಲಿ ಎಂದು ಹಾರೈಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಬಿಎಸ್‌ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕೊರೊನಾ ಸೋಂಕಿನಿಂದ ಆದಷ್ಟು ಬೇಗ ಗುಣಮುಖರಾಗಲಿ. ಉತ್ತಮ ಆರೋಗ್ಯದೊಂದಿಗೆ ಮತ್ತೆ ಎಂದಿನಂತೆ ತಮ್ಮ ಕೆಲಸ ಕಾರ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ. ಭಾನುವಾರ ರಾತ್ರಿ ಸಿಎಂ ಬಿಎಸ್‌ವೈ ಅವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡ ಪರಿಣಾಮ ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಸಿದ್ದರಾಮಯ್ಯ ಅವರಿಗೂ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಅವರು ಕೂಡ ಮಣಿಪಾಲ್ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.


from India & World News in Kannada | VK Polls https://ift.tt/2Xpi3UJ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...