ತಂದೆಯ ಮೃತದೇಹಕ್ಕಾಗಿ ಮಗಳ ಕಣ್ಣೀರು, ಖಾಸಗಿ ಆಸ್ಪತ್ರೆಯ ವಿರುದ್ಧ ಸುಧಾಕರ್‌ ಗರಂ

ಬೆಂಗಳೂರು: ತಂದೆಯ ಮೃತದೇಹವನ್ನು ಪಡೆಯಲು ಮಗಳು ಕಣ್ಣೀರು ಹಾಕಿದ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಹಣ ಕಟ್ಟಿಲ್ಲ ಎಂಬ ಕಾರಣಕ್ಕಾಗಿ ಮೃತದೇಹವನ್ನು ನೀಡಲು ನಿರಾಕರಿಸಿದ ಖಾಸಗಿ ಆಸ್ಪತ್ರೆಯ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ಬೆಂಗಳೂರಿನ ಮಡಿವಾಳದ ಸೆಂಟ್ ಜಾನ್ಸ್ ಖಾಸಗಿ ಆಸ್ಪತ್ರೆಯಯಲ್ಲಿ ಈ ಘಟನೆ ನಡೆದಿದೆ. ಚಿಕಿತ್ಸೆಗಾಗಿ ದಾಖಲಾಗಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆದರೆ ಅವರ ಮೃತದೇಹವನ್ನು ಕುಟುಂಬಸ್ಥರಿಗೆ ನೀಡಲು ಆಸ್ಪತ್ರೆಯ ಆಡಳಿತ ಮಂಡಳಿ ತಯಾರಿಲ್ಲ. ಚಿಕಿತ್ಸಾ ಬಿಲ್‌ ಕಟ್ಟಿಲ್ಲ ಎಂಬ ಕಾರಣ ನೀಡಿ ಮೃತದೇಹ ನೀಡಲು ನಿರಾಕರಿಸಿದೆ. ಈ ಘಟನೆ ಮಾಧ್ಯಮಗಳಲ್ಲೂ ವರದಿಯಾಗಿದೆ. ತಂದೆಯ ಮೃತದೇಹವನ್ನು ಪಡೆಯಲು ಪುತ್ರಿ ಪರಿಪರಿಯಾಗಿ ಬೇಡಿದರೂ ಆಸ್ಪತ್ರೆಯ ಆಡಳಿತ ಮಂಡಳಿ ಇದಕ್ಕೆ ಒಪ್ಪಿಲ್ಲ. ಈ ಘಟನೆಗೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್‌ ಗರಂ ಆಗಿದ್ದು ಖಾಸಗಿ ಆಸ್ಪತ್ರೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇದೇ ವಿಚಾರವಾಗಿ ಟ್ವೀಟ್ ಮಾಡಿದ ಅವರು “ಹಣಕ್ಕಿಂತ ಮಾನವೀಯತೆ ದೊಡ್ಡದು. ಹಣ ಕಟ್ಟಿ ಇಲ್ಲ ಅಂದ್ರೆ ಮೃತದೇಹ ಕೊಡಲ್ಲ ಅನ್ನುತ್ತಿರುವ ಮಡಿವಾಳದ ಸೆಂಟ್ ಜಾನ್ಸ್ ಖಾಸಗಿ ಆಸ್ಪತ್ರೆಯ ವರ್ತನೆ ತೀರಾ ಅಮಾನವೀಯ. ತಂದೆಯ ಮೃತದೇಹಕ್ಕಾಗಿ ಮಗಳು ಕಣ್ಣೀರಿಡುತ್ತಿರುವ ಸುದ್ದಿಯನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಕೂಡಲೇ ಈ ಮಹಿಳೆಯ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ” ಎಂದಿದ್ದಾರೆ.


from India & World News in Kannada | VK Polls https://ift.tt/30nFSOK

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...