'ಅಯ್ಯೋ ಸಿದ್ದರಾಮಯ್ಯನವರೇ, ಹಿಂದೂಗಳಿಗೆ ನಿಮ್ಮ ನಿಜ ಬಣ್ಣದ ಅರಿವಿದೆ' : ಕಟೀಲ್

ಬೆಂಗಳೂರು: ಹಿಂದುಳಿದ ವರ್ಗದ ನಕಲಿ ನಾಯಕ ಎಂದು ಅರೋಪಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಏಟಿಗೆ ಸಿದ್ದರಾಮಯ್ಯ ಅವರು ಖಡಕ್ ಆಗಿ ತಿರುಗೇಟು ನೀಡಿದ್ದರು. ಬುದ್ದಿವಂತರ ಜಿಲ್ಲೆ‌ ಎಂಬ ದಕ್ಷಿಣಕನ್ನಡದ ಖ್ಯಾತಿಗೆ ಅಸೂಯೆಪಟ್ಟು ಬಿಜೆಪಿ ವರಿಷ್ಠರು, ಎಂಬ ನಕಲಿ ಶ್ಯಾಮನನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿರಬಹುದು, ಇಲ್ಲವೇ ಪಕ್ಷದಲ್ಲಿ ಈ ಮಟ್ಟದ ಬೌದ್ದಿಕ ದಾರಿದ್ರ್ಯ ಇದ್ದಿರಬಹುದು ಎಂದು ಕಿಚಾಯಿಸಿದ್ದರು. ಇದೀಗ ಸಿದ್ದರಾಮಯ್ಯ ಅವರ ಸರಣಿ ಟ್ವೀಟ್‌ಗಳ ವಾಗ್ದಾಳಿಗೆ ನಳಿನ್ ಕುಮಾರ್ ಮತ್ತೆ ಟಾಂಗ್ ನೀಡಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಕಟೀಲ್, ಅಯ್ಯೋ ಸಿದ್ದರಾಮಯ್ಯನವರೇ, ಹಿಂದುಗಳಿಗೆ ನಿಮ್ಮ ನಿಜ ಬಣ್ಣದ ಅರಿವಿದೆ. ಎಸ್‌ಡಿಪಿಐ ಕಾರ್ಯಕರ್ತರ ವಿರುದ್ಧದ ಪ್ರಕರಣಗಳನ್ನು ಹಿಂಪಡೆದವರು ಯಾರು ಎಂಬುದು ಹಿಂದುಗಳು ಮರೆತಿಲ್ಲ. ನೀವು ಜಾತಿ ಧರ್ಮಗಳ ಹೆಸರಿನಲ್ಲಿ ಜನರನ್ನು ಒಡೆದು ಆಳಲು ಪ್ರಯತ್ನಿಸಿದ್ದು ಗಟ್ಟಾಗೇನೂ ಉಳಿದಿಲ್ಲ ಎಂದು ಟಾಂಗ್ ನೀಡಿದ್ದಾರೆ. ಇದಕ್ಕೂ ಮೊದಲು ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದ ನಳಿನ್ ಕುಮಾರ್ ಕಟೀಲ್, ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ನಕಲಿ ನಾಯಕ ಎಂದು ವಾಗ್ದಾಳಿ ನಡೆಸಿದ್ದರು. ಕಟೀಲ್ ಆರೋಪಕ್ಕೆ ಸರಿಯಾಗೇ ತಿರುಗೇಟು ನೀಡಿದ್ದ ಸಿದ್ದರಾಮಯ್ಯ ಕೋಮುಗಲಭೆಯಲ್ಲಾದ ಹತ್ಯೆಗಳು ಸೇರಿದಂತೆ ಮಂಗಳೂರಿನ ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಹತ್ಯೆಯ ಪ್ರಮುಖ ಆರೋಪಿಯಾದ ನಿಮ್ಮ ಖಾಸಾ ದೋಸ್ತ್ ನರೇಶ್ ಶೆಣೈಯನ್ನು ರಕ್ಷಿಸುತ್ತಿರುವವರು ಯಾರೆಂದು ತಿಳಿಸುವಿರಾ? ಬಾಳಿಗರ ಕೊಲೆಗಡುಕರನ್ನು ಶಿಕ್ಷಿಸಲು ಹೋರಾಡುತ್ತಿರುವ ಅವರ ಸೋದರಿಯರಿಗೆ ಯಾವಾಗ ನ್ಯಾಯಕೊಡಿಸುತ್ತೀರಿ? ಎಂದು ಪ್ರಶ್ನಿಸಿದ್ದರು. ಇದೀಗ ನಳಿನ್ ಕುಮಾರ್ ಟ್ವೀಟ್‌ಗೆ ಸಿದ್ದರಾಮಯ್ಯ ಏನು ಪ್ರತಿಕ್ರಿಯೆ ಕೊಡುತ್ತಾರೆ ಅನ್ನೋದು ಕುತೂಹಲ ಮೂಡಿಸಿದೆ.


from India & World News in Kannada | VK Polls https://ift.tt/31gzCbY

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...