ಡಿಜೆ ಹಳ್ಳಿ ಗಲಭೆ: ತನಿಖೆಯಿಂದ ಸತ್ಯ ಸಂಗತಿಗಳು ಹೊರಬರುತ್ತಿವೆ, ಬಿಎಸ್‌ವೈ

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಸತ್ಯ ಸಂಗತಿ ತನಿಖೆಯಿಂದ ಹೊರಬರುತ್ತಿದೆ ಎಂದು ಸಿಎಂ ಬಿಎಸ್‌ ಯಡಿಯೂರಪ್ಪ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು ಸತ್ಯ ಸಂಗತಿ ಹೊರಬಂದ ಮೇಲೆ ಎಲ್ಲಾ ಗೊತ್ತಾಗಲಿದೆ ಎಂದು ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದರು. ಗಲಭೆ ಪ್ರಕರಣವನ್ನು ಬಿಜೆಪಿ ರಾಜಕೀಯಗೊಳಿಸುತ್ತಿದೆ ಎಂದು ಕಾಂಗ್ರೆಸ್ ಆರೋಪವನ್ನು ನಿರಾಕರಿಸಿದ , ಈ ವಿಚಾರದಲ್ಲಿ ರಾಜಕಾರಣ ಮಾಡುವ ಪ್ರಶ್ನೆ ಇಲ್ಲ ಎಂದರು. ಘಟನೆಯ ಕುರಿತಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆಯಿಂದಾಗಿ ಅನೇಕ ಬೇರೆ ಪ್ರಕರಣಗಳು ಹೊರಬಹುತ್ತಿದೆ. ರಾಜಕೀಯ ಮಾಡುವ ಬದಲಾಗಿ ಸತ್ಯ ಸಂಗತಿ ಜನರಿಗೆ ತಿಳಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದರು. ಗಲಭೆಯಲ್ಲಿ ಭಾಗಿಯಾಗಿದ್ದ ಆರೋಪಿಗಳು ಬೇರೆ ಬೇರೆ ರೂಪದಲ್ಲಿ ವ್ಯವಹಾರ ಮಾಡುತ್ತಿರುವುದು ಪೊಲೀಸರ ತನಿಖೆಯಿಂದ ಬಹಿರಂಗವಾಗುತ್ತಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಮಾಡುತ್ತಿರುವ ಆರೋಪದಲ್ಲಿ ಹುರುಳಿಲ್ಲ ಎಂದು ಸ್ಪಷ್ಟಪಡಿಸಿದರು. ಪ್ರವಾದಿ ನಿಂದನೆ ವಿಚಾರವಾಗಿ ಡಿಜೆ ಹಳ್ಳಿ, ಕೆಜಿ ಹಳ್ಳಿಯಲ್ಲಿ ಗಲಭೆ ನಡೆದಿತ್ತು. ಗಲಭೆಗೆ ಸಂಬಂಧಿಸಿದಂತೆ ಈಗಾಗಲೇ 400 ಕ್ಕೂ ಅಧಿಕ ಜನರನ್ನು ಬಂಧನ ಮಾಡಲಾಗಿದೆ.


from India & World News in Kannada | VK Polls https://ift.tt/2EfYNTt

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...