ಬೆಂಗಳೂರು: ವಿರೋಧ ಪಕ್ಷದ ನಾಯಕ ಹಾಗೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂತ್ರನಾಳದ ಸಮಸ್ಯೆಯಿಂದ ಬಳಲುತ್ತಿರುವ ಸಿದ್ದರಾಮಯ್ಯ ಅವರಿಗೆ ಎರಡು ದಿನಗಳಿಂದ ಕೂಡಾ ಇತ್ತು. ಈ ಹಿನ್ನೆಲೆ ವೈದ್ಯರ ಸೂಚನೆಯಂತೆ ನಗರದ ಮಣಿಪಾಲ ಆಸ್ಪತ್ರೆಗೆ ಸೋಮವಾರ ರಾತ್ರಿ ದಾಖಲಾಗಿದ್ದಾರೆ. ಅಲ್ಲದೇ ವೈದ್ಯರ ಸೂಚನೆಯಂತೆ ಸಿದ್ದರಾಮಯ್ಯ ಅವರು ಕೋವಿಡ್ ತಪಾಸಣೆಗೆ ಒಳಗಾಗಿದ್ದು, ಪರೀಕ್ಷೆಯ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಇನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡ ಕೊರೊನಾ ಹಿನ್ನೆಲೆ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ ತಡರಾತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿದಾಗ ಸಿಎಂ ಅವರನ್ನ ಭೇಟಿಯಾಗಲು ತೆರಳಿರಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಸಿದ್ದರಾಮಯ್ಯ ಅವರು ಜ್ವರ ಹಿನ್ನೆಲೆ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ಅವರ ಆಪ್ತ ಮೂಲಗಳು ಮಾಹಿತಿ ನೀಡಿವೆ.
from India & World News in Kannada | VK Polls https://ift.tt/39Ql2e6