ಬೆಂಗಳೂರು: ನಾಡಿನ ದೊರೆ ಬಿಎಸ್ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆ ಬಿಎಸ್‌ವೈ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲವು ಕಾರ್ಯಕ್ರಮಗಳಲ್ಲಿ ಹಾಗೂ ಸಾರ್ವಜನಿಕವಾಗಿ ಕೆಲಸ ಮಾಡಿರುವುದರಿಂದ ಕೊರೊನಾ ಸೋಂಕಿ ಸಿಎಂಗೆ ವಕ್ಕರಿಸಿರಬಹುದು ಎಂದು ಅಂದಾಜಿಸಲಾಗಿದೆ. ಈ ಬೆನ್ನಲ್ಲೆ ಅನೇಕ ಗಣ್ಯರು ಸಿಎಂ ಯಡಿಯೂರಪ್ಪ ಅವರಿಗೆ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ. ಸಚಿವ ಅಶ್ವಥ್ ನಾರಾಯಣ್ ಟ್ವೀಟ್ ಮೂಲಕ ಶುಭ ಹಾರೈಸಿದ್ದು, "ನಮ್ಮ ಜನನಾಯಕ ಶೀಘ್ರ ಗುಣಮುಖರಾಗಲಿ ಎಂದು ನನ್ನ ಪ್ರಾರ್ಥನೆ. ನಾಡಿನ ಮಹಾಜನತೆಯ ಆಶೀರ್ವಾದ ನಿಮ್ಮ ಮೇಲಿದೆ. ಗೆಟ್ ವೆಲ್ ಸೂನ್ ಸಾರ್" ಎಂದು ಟ್ವೀಟ್ ಮಾಡಿದ್ದಾರೆ. ಇನ್ನು ಸಚಿವ ಶ್ರೀರಾಮುಲು ಕೂಡ ಹಾರೈಸಿದ್ದು, " ಮಾನ್ಯ ಮುಖ್ಯಮಂತ್ರಿ ಶ್ರೀ ಬಿಎಸ್ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಹಗಲಿರುಳೂ ಶ್ರಮಿಸುತ್ತಿರುವ ಮಾನ್ಯ ಮುಖ್ಯಮಂತ್ರಿಯವರು ಶೀಘ್ರ ಗುಣಮುಖರಾಗಿ ಜನಸೇವೆಗೆ ಲಭ್ಯರಾಗುವಂತಾಗಲಿ ಎಂದು ಹಾರೈಸುತ್ತೇನೆ" ಎಂದು ಟ್ವೀಟ್ ಮಾಡಿದ್ದಾರೆ.
from India & World News in Kannada | VK Polls https://ift.tt/3i0KX5t