ವಿಡಿಯೋ ಕಾನ್ಫರೆನ್ಸ್ ಮೂಲಕ ಭೂಮಿ ಪೂಜೆಯಲ್ಲಿ ಭಾಗವಹಿಸುತ್ತಾರಾ ಅಡ್ವಾಣಿ-ಜೋಶಿ?

ನವದೆಹಲಿ: ಇದೇ ಆಗಸ್ಟ್ 5ರಂದು ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ನಡೆಯಲಿರುವ, ಭವ್ಯ ರಾಮ ಮಂದಿರದ ಭೂಮಿ ಪೂಜೆಗೆ ಬಿಜೆಪಿ ಹಿರಿಯ ನಾಯಕರಾದ ಹಾಗೂ ಭಾಗವಹಿಸುವುದು ಅನುಮಾನ ಎನ್ನಲಾಗಿದೆ. ಅಡ್ವಾಣಿ ಹಾಗೂ ಜೋಶಿ ನೇರವಾಗಿ ಭೂಮಿ ಪೂಜೆಯಲ್ಲಿ ಭಾಗವಹಿಸದೇ ವಿಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಈಗಾಗಲೇ ಅಡ್ವಾಣಿ ಹಾಗೂ ಜೋಶಿ ಅವರಿಗೆ ದೂರವಾಣಿ ಕರೆ ಮಾಡಿ ಭೂಮಿ ಪೂಜೆಗೆ ಆಹ್ವಾನ ನೀಡಿರುವ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್, ಇಬ್ಬರೂ ಹಿರಿಯ ನಾಯಕರಿಗೆ ಆಮಂತ್ರಣ ಪತ್ರಿಕೆಯನ್ನೂ ರವಾನಿಸಿದೆ ಎನ್ನಲಾಗಿದೆ. ಆದರೆ ಇಬ್ಬರೂ ನಾಯಕರು ನೇರವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸದೇ, ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಲು ತೀರ್ಮಾನಿಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇತ್ತೀಚಿಗಷ್ಟೇ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಅಡ್ವಾಣಿ ಹಾಗೂ ಜೋಶಿ, ವಿಡಿಯೋ ಕಾನ್ಫರೆನ್ಸ್ ಮೂಲಕ ಲಕ್ನೋ ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ತಮ್ಮ ಹೇಳಿಕೆಯನ್ನು ದಾಖಲಿಸಿರುವುದನ್ನು ಇಲ್ಲಿ ಸ್ಮರಿಸಬಹುದು.


from India & World News in Kannada | VK Polls https://ift.tt/3fstSju

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...