ಕೊರೊನಾ ಸಾವು-ನೋವುಗಳಲ್ಲಿ ಕರ್ನಾಟಕ ನಂಬರ್ ಒನ್ ಆಗಲು ಹೊರಟಿದೆ! ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಕೊರೊನಾ ಸಾವು ನೋವುಗಳಲ್ಲಿ ತಮಿಳುನಾಡು, ಮಹಾರಾಷ್ಟ್ರವನ್ನು ಮೀರಿಸಿ ಕರ್ನಾಟಕ ನಂಬರ್‌ 1 ಆಗಲು ಹೊರಟಿದೆ ಎಂದು ವಿರೋಧ ಪಕ್ಷದ ನಾಯಕ ಕಿಡಿಕಾರಿದ್ದಾರೆ. ಸರಣಿ ಟ್ವೀಟ್‌ಗಳ ಮೂಲಕ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಅವರು “ಉಳಿದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕೊರೊನಾ ಸೋಂಕು ನಿಯಂತ್ರಣದಲ್ಲಿತ್ತು ಎನ್ನುವ ಕಾರಣಕ್ಕೆ ಸಹಿಸಿಕೊಂಡು ಸುಮ್ಮನಿದ್ದೆವು.ಈಗ ಕೊರೊನಾ ಸಾವು-ನೋವುಗಳಲ್ಲಿ ಮಹಾರಾಷ್ಟ್ರ-ತಮಿಳುನಾಡನ್ನು ಮೀರಿಸಿ ಕರ್ನಾಟಕ ನಂಬರ್ ಒನ್ ಆಗಲು ಹೊರಟಿದೆ. ಈಗಲೂ ಸುಮ್ಮನಿದ್ದರೆ ಜನದ್ರೋಹ‌ ಆಗಲಾರದೇ?” ಎಂದಿದ್ದಾರೆ. ರಾಜ್ಯದಲ್ಲಿ ಕೊರೊನಾ ಅನಿಯಂತ್ರಿತವಾಗಿ ಹರಡುವುದಕ್ಕೂ, ಸರ್ಕಾರದ ಭ್ರಷ್ಟಾಚಾರಕ್ಕೂ ನೇರವಾದ ಸಂಪರ್ಕ ಇದೆ. ಈ ಕಾರಣಕ್ಕಾಗಿ ನಾವು ಅಭಿಯಾನದ ಮೂಲಕ ಜನರ ಬಳಿ ನೇರವಾಗಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ. ಜನರ ಕಷ್ಟದ ಕಾಲದಲ್ಲಿ ವಿರೋಧಪಕ್ಷಗಳು ಸಹಕಾರ ನೀಡಬೇಕು, ಆರೋಪ ಮಾಡುವುದು ಸರಿಯೇ ಎಂದು ಕೇಳ್ತಿದ್ದಾರೆ. ಇಂತಹ ಸಾವು-ನೋವಿನ ಕಷ್ಟ ಕಾಲದಲ್ಲಿ ಜನರ ಜೀವ ಉಳಿಸಬೇಕೇ ಹೊರತು ಭ್ರಷ್ಟಾಚಾರ ಮಾಡುವುದು ಸರಿಯೇ? ಎಂದು ನಾವು ಕೇಳುತ್ತಿದ್ದೇವೆ. ನಿಮ್ಮ ಆತ್ಮಸಾಕ್ಷಿಯನ್ನು ಕೇಳಿ ಹೇಳಿ ಎಂದು ಟ್ವೀಟ್‌ನಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ನಮ್ಮಿಂದ ಸಹಕಾರ ನಿರೀಕ್ಷಿಸುವ ಬಿಜೆಪಿ ಸರ್ಕಾರ, ಕೊರೊನಾ ಕಾಲದಲ್ಲಿ ಮಧ್ಯಪ್ರದೇಶದ ನಮ್ಮ ಸರ್ಕಾರಕ್ಕೆ ಬಿಜೆಪಿ ಯಾಕೆ‌ ಸಹಕಾರ ಕೊಡಲಿಲ್ಲ? ರಾಜಸ್ತಾನದ‌ ನಮ್ಮ ಸರ್ಕಾರವನ್ನು ಉರುಳಿಸಲು ಹೊರಟದ್ದು ಯಾಕೆ? ಎಂದು ಪ್ರಶ್ನಿಸಿದ್ದಾರೆ.


from India & World News in Kannada | VK Polls https://ift.tt/30kWzKI

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...