ಡಿಜೆ ಹಳ್ಳಿ ಗಲಭೆಯಿಂದ ಕಾಂಗ್ರೆಸ್ ಬೆತ್ತಲಾಗಿದೆ, ಬಿ.ವೈ ವಿಜಯೇಂದ್ರ ಕಿಡಿ

ಬೆಂಗಳೂರು: ಗಲಭೆಯಿಂದ ಕಾಂಗ್ರೆಸ್ ಬೆತ್ತಲಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರ ಹೇಳಿಕೆಯನ್ನು ಗಮನಿಸಿದರೆ ಅಳಬೇಕೋ ನಗಬೇಕೋ ಎಂದು ಗೊತ್ತಾಗುತ್ತಿಲ್ಲ ಎಂದರು. ಡಿಜೆ ಹಳ್ಳಿ ಗಲಭೆಯಲ್ಲಿ ರಾಜಕೀಯ ಬೆಳೆ ಬೇಯಿಸಿಕೊಳ್ಳಲು ಹೋಗಿ ಕಾಂಗ್ರೆಸ್ ಬೆತ್ತಲಾಗಿದೆ.ಗಲಭೆ ಪ್ರಕರಣದ ಸತ್ಯ ಬಯಲಾಗುತ್ತಿದೆ. ಇನ್ನು ಮುಂದಾದರೂ ಕಾಂಗ್ರೆಸ್ ಜಾವಾಬ್ದಾರಿಯುತ ವಿಪಕ್ಷವಾಗಿ ಕೆಲಸ ಮಾಡಲಿ ಎಂದರು. ಪ್ರವಾದಿ ನಿಂದನೆ ವಿಚಾರವಾಗಿ ಡಿಜೆ ಹಳ್ಳಿ, ಕೆಜಿ ಹಳ್ಳಿಯಲ್ಲಿ ಗಲಭೆ ನಡೆದಿದ್ದು ಕಿಡಿಗೇಡಿಗಳು ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದ್ದರು. ಈ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದು ಬಿಜೆಪಿ ಹಾಗೂ ಕಾಂಗ್ರೆಸ್ ಪರಸ್ಪರ ಆರೋಪ ಪ್ರತ್ಯಾರೋಪದಲ್ಲಿ ತೊಡಗಿಕೊಂಡಿವೆ. ಡಿಕೆಶಿ ವಿರುದ್ಧ ಶೆಟ್ಟರ್‌ ಕಿಡಿ ಫೋನ್ ಟ್ಯಾಪಿಂಗ್ ಆಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರ ಆರೋಪಕ್ಕೆ ಸಚಿವ ಜಗದೀಶ್ ಶೆಟ್ಟರ್‌ ಕಿಡಿಕಾರಿದ್ದಾರೆ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಫೋನ್ ಟ್ಯಾಪಿಂಗ್ ಆಗಿದ್ದವು. ಈ ಸಂಬಂಧ ದೂರು ದಾಖಲಾಗಿತ್ತು ಅದಕ್ಕೆ ಏನು ಕ್ರಮ ಆಗಿದೆ ಎಂಬುವುದನ್ನು ಮೊದಲು ತಿಳಿಸಲಿ ಎಂದು ತರಾಟೆಗೆ ತೆಗೆದುಕೊಂಡರು. ಡಿಕೆ ಶಿವಕುಮಾರ್ ಅವರಿಗೆ ಈ ಬಗ್ಗೆ ಮಾತನಾಡಲು ನೈತಿಕತೆ ನೈತಿಕತೆ ಇಲ್ಲ ಎಂದು ಜಗದೀಶ್ ಶೆಟ್ಟರ್‌ ಡಿಕೆಶಿ ಹಾಗೂ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


from India & World News in Kannada | VK Polls https://ift.tt/3gqww9I

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...