ಬೆಂಗಳೂರು: ಗೃಹ ಸಚಿವ ಅಮಿತ್ ಶಾ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಐಟಿ ಸೆಲ್‌ನ ಆನಂದ್ ಪ್ರಸಾದ್ ಅವರನ್ನ ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಸಂಬಂಧ ಟ್ವೀಟ್ ಮಾಡಿದ ಕೆಪಿಸಿಸಿ ಐಟಿ ಸೆಲ್‌ನ ಆನಂದ್ ಪ್ರಸಾದ್ ಅಮಿತ್ ಶಾ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಹಿನ್ನೆಲೆ ಪೊಲೀಸರು ಆನಂದ್ ಪ್ರಸಾದ್ ಅವರನ್ನ ಬಂಧಿಸಿದ್ದಾರೆ.
from India & World News in Kannada | VK Polls https://ift.tt/2Xn3P6X