ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ನಡೆದಿದೆ. ನಗರದ ಕೆ.ಆರ್ ಪುರಂ ಪೊಲೀಸ್ ಠಾಣೆಯ ರಸ್ತೆಯ ಬಳಿ ಉದ್ಯಮಿಯೊಬ್ಬರ ಮೇಲೆ ಐವರು ದುಷ್ಕರ್ಮಿಗಳ ತಂಡ ಗುಂಡಿನ ದಾಳಿ ನಡೆಸಿದೆ. ರಿಯಲ್ ಎಸ್ಟೇಟ್ ಉದ್ಯಮಿ ಆಟೋ ಬಾಬು ಎಂಬುವವರ ಮೇಲೆ ಐವರು ದುಷ್ಕರ್ಮಿಗಳ ತಂಡ ಭಾನುವಾರ ಬೆಳಗ್ಗೆ ಗುಂಡಿನ ದಾಳಿ ನಡೆಸಿದೆ. ದಾಳಿಯಿಂದ ಆಟೋ ಬಾಬು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಪ್ರಮುಖ ಕಾರಣ ಏನು ಎಂಬುವುದು ತಿಳಿದುಬಂದಿಲ್ಲ. ರಿಯಲ್ ಎಸ್ಟೇಟ್ ಉದ್ಯಮದ ಹಿನ್ನೆಲೆಯಲ್ಲಿ ವೈಯಕ್ತಿಕ ದ್ವೇಷದ ಕಾರಣದಿಂದ ಈ ದಾಳಿ ನಡೆದಿರುವ ಸಾಧ್ಯತೆ ಇದೆ ಎಂಬ ಶಂಕೆ ವ್ಯಕ್ತವಾಗಿದೆ. ಈಗಾಗಲೇ ಸ್ಥಳಕ್ಕೆ ಪೊಲೀಸರು ತೆರಳಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಆಟೋ ಬಾಬು ಕೆ.ಆರ್ ಪುರಂ ಪೊಲೀಸ್ ಠಾಣೆಯ ರಸ್ತೆಯಲ್ಲಿ ಕಚೇರಿ ಹೊಂದಿದ್ದಾರೆ. ಕಚೇರಿಯಲ್ಲಿ ಇರುವಾಗಲೇ ಈ ದಾಳಿ ನಡೆದಿದೆ. ಗುಂಡಿನ ದಾಳಿ ನಡೆಸಿರುವ ಆರೋಪಿಗಳು ಪರಾರಿಯಾಗಿದ್ದು ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ದಾಳಿಗೆ ನೈಜ ಕಾರಣ ಏನು ಎಂಬುವುದು ತನಿಖೆಯ ಬಳಿಕಷ್ಟೇ ತಿಳಿದುಬರಲಿದೆ.
from India & World News in Kannada | VK Polls https://ift.tt/2QgQ1a3