ಸೆಲ್ಫಿ ಫೋಟೊ ಇಟ್ಟುಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಸಹೋದ್ಯೋಗಿ ವಿರುದ್ಧ ಎಫ್‌ಐಆರ್‌!

ಬೆಂಗಳೂರು: ಸಹೋದ್ಯೋಗಿ ಜತೆಗಿನ ಫೋಟೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದವನ ವಿರುದ್ಧ ರಾಮಮೂರ್ತಿನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಹೊಯ್ಸಳನಗರದ ನಿವಾಸಿ 27 ವರ್ಷದ ಮಹಿಳೆ ಮೆಟ್ರೊ ರೈಲು ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದು ಇವರು ಕೊಟ್ಟ ದೂರಿನ ಮೇರೆಗೆ ಹರೀಶ್‌ ಎಂಬಾತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಹೋದ್ಯೋಗಿ ಆಗಿರುವ ಕಾರಣದಿಂದ ಸೆಲ್ಫಿ ತೆಗೆದುಕೊಂಡಿದ್ದರು. ಇದಾದ ಕೆಲ ದಿನಗಳ ಬಳಿಕ ಯುವಕ ತನ್ನನ್ನು ಪ್ರೀತಿಸುವಂತೆ ಮಹಿಳೆಯ ಬೆನ್ನು ಬಿದ್ದಿದ್ದ. ತನಗೆ ಮದುವೆಯಾಗಿದೆ ಎಂದು ಹೇಳಿ ಆತನಿಗೆ ಬುದ್ಧಿ ಹೇಳಿದರೂ ಆತ ಕೇಳಲಿಲ್ಲ. ಬಳಿಕ ಆತನ ಕಾಟ ತಾಳದೆ ಮಹಿಳೆ ಕೆಲಸ ಬಿಟ್ಟಿದ್ದರು. ಅಷ್ಟಾದರೂ ಮತ್ತೆ ಮತ್ತೆ ಕರೆ ಮಾಡಿ ಕಾಟ ಕೊಡುತ್ತಿದ್ದ. ತಾನು ಹೇಳಿದಂತೆ ಕೇಳಬೇಕು. ಇಲ್ಲವಾದರೆ ಸೆಲ್ಫಿ ಫೋಟೊಗಳನ್ನು ಅಶ್ಲೀಲವಾಗಿ ಎಡಿಟ್‌ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್‌ ಮಾಡುವುದಾಗಿ ಬೆದರಿಸಿದ್ದಾನೆ ಎಂದು ಆರೋಪಿಸಿ ಮಹಿಳೆ ದೂರಿನಲ್ಲಿ ವಿವರಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದು ಸದ್ಯದಲ್ಲೇ ಆರೋಪಿಯನ್ನು ವಶಕ್ಕೆ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.


from India & World News in Kannada | VK Polls https://ift.tt/33ejs4e

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...