ಬೆಂಗಳೂರು: ಮುಂದಿನ ಆರು ತಿಂಗಳು ಮಾತ್ರ ಸಿಎಂ ಸ್ಥಾನದಲ್ಲಿ ಇರುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಭವಿಷ್ಯ ನುಡಿದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಬಿಜೆಪಿ ಪಕ್ಷದ ಕೆಲವರೇ ಈ ಬಗ್ಗೆ ನನಗೆ ಮಾಹಿತಿ ನೀಡಿದ್ದಾರೆ ಎಂದರು. ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಕುರಿತಾಗಿ ಪ್ರತಿಕ್ರಿಯೆ ನೀಡಿದ ಅವರು ಬಿಎಸ್ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಬದಲಾವಣೆ ಮಾಡುವುದು ಬಿಡುವುದು ಅವರ ಪಕ್ಕಕ್ಕೆ ಬಿಟ್ಟ ವಿಚಾರವಾಗಿದೆ. ಬಿಎಸ್‌ವೈ ಸಿಎಂ ಆಗಿ ಇದ್ದರೂ ನಮಗೆ ಲಾಭ ಇಲ್ಲದಿದ್ದರೂ ಲಾಭವೇ ಎಂದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವಷ್ಟು ದಿನ ನಮಗೆ ಲಾಭವಾಗಲಿದೆ ಎಂದ ಸತೀಶ್ ಜಾರಕಿಹೊಳಿ ನನಗೆ ಬಂದ ಮಾಹಿತಿಯ ಪ್ರಕಾರ ಯಡಿಯೂರಪ್ಪ ಮುಂದಿನ ಆರು ತಿಂಗಳುಗಳ ಕಾಲವಷ್ಟೇ ಸಿಎಂ ಸ್ಥಾನದಲ್ಲಿ ಇರುತ್ತಾರೆ ಎಂದರು. ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳು ತೀವ್ರಗೊಳ್ಳುತ್ತಿದ್ದು ಬಿಎಸ್‌ವೈ ಸಿಎಂ ಪಟ್ಟ ಕಳೆದುಕೊಳ್ಳುತ್ತಾರೆ ಎಂದೇ ಹೇಳಲಾಗುತ್ತಿದೆ. ಆದರೆ ಮುಂದಿನ ಮೂರು ವರ್ಷಗಳ ಕಾಲ ಬಿಎಸ್‌ವೈ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎನ್ನುತ್ತಿದ್ದಾರೆ ಅವರ ಆಪ್ತರು.
from India & World News in Kannada | VK Polls https://ift.tt/3kdxutc