'ನಾಗೇಂದ್ರ ಆತ್ಮಹತ್ಯೆ ವಿಷಯದಲ್ಲಿ ಸರ್ಕಾರಕ್ಕೆ ಯಾರನ್ನೂ ರಕ್ಷಿಸುವ ಇಚ್ಛೆಯಿಲ್ಲ' : ಡಾ.ಸುಧಾಕರ್

ಬೆಂಗಳೂರು: ಎಲ್ಲಾ ರಾಜಕೀಯ ಆರೋಪ ಪ್ರತ್ಯಾರೋಪಗಳ ಮಧ್ಯೆ ವೈದ್ಯಕೀಯ ಶಿಕ್ಷಣ ಸಚಿವ ತಮ್ಮ ಜವಾಬ್ದಾರಿಯನ್ನರಿತು ತನ್ನಿಂದಾದಷ್ಟು ಗಂಭೀರವಾಗಿ ಕೆಲಸವನ್ನು ನಿರ್ವಹಿಸುತ್ತಿರುವುದು ಸತ್ಯ ಅನ್ನೋದು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿರೋ ಮಾತು. ತನ್ನ ಕ್ಷೇತ್ರವ್ಯಾಪ್ತಿಯಲ್ಲಿ ಆಗುತ್ತಿರುವ ಸನ್ನಿವೇಶಗಳಿಗೆ ಸ್ಪಂದಿಸುವ ಸಚಿವ ಸುಧಾಕರ್, ಇದೀಗ ಮೈಸೂರಿನಲ್ಲಿ ಪ್ರತಿಭಟನೆಯಲ್ಲಿರೋ ವೈದ್ಯ ಸಿಬ್ಬಂದಿಯ ಕುರಿತಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಮೈಸೂರಿನ ಡಿಎಚ್ಓ ಕಚೇರಿ ಮುಂದೆ ಪ್ರತಿಭಟಿಸುತ್ತಿರುವ ವೈದ್ಯ ಸಿಬ್ಬಂದಿಗೆ ನನ್ನದೊಂದು ಕಳಕಳಿಯ ಮನವಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಆದರೆ ಕೊರೊನಾ ಸಂಕಷ್ಟ ಕಾಲದಲ್ಲಿ ಪ್ರತಿಭಟನೆ ಮಾಡಿ ರೋಗಿಗಳಿಗೆ ತೊಂದರೆ ಮಾಡಬೇಡಿ. ʼವೈದ್ಯೋ ನಾರಾಯಣೋಹರಿಃ’ ಎಂದು ನಂಬಿರುವ ಜನರ ಸೇವೆಗೆ ಮುಂದಾಗಿ ಎಂದು ಮನವಿ ಮಾಡಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಅವರು, ಈಗಾಗಲೇ ಆರೋಗ್ಯಾಧಿಕಾರಿ ಶ್ರೀ ಸಾವಿನ ಬಗ್ಗೆ ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆ ನಡೆಸಿ 7 ದಿನಗಳೊಳಗೆ ವರದಿ ನೀಡಲು ಮೈಸೂರಿನ ಪ್ರಾದೇಶಿಕ ಆಯುಕ್ತರನ್ನು ನೇಮಿಸಲಾಗಿದೆ. ಆದರೂ ತಾವು ಈ ರೀತಿ ಪ್ರತಿಭಟನೆ ಮಾಡುವುದು ಸರಿಯಲ್ಲ. ವರದಿ ಬಂದ ತಕ್ಷಣವೇ ಯಾರೇ ತಪ್ಪಿತಸ್ಥರಾಗಿದ್ದರೂ ಸರಿ ಕ್ರಮ ಕೈಗೊಳ್ಳುಲಾಗುವುದು ಎಂದು ಭರವಸೆ ನೀಡಿದ್ದಾರೆ. ಮತ್ತೊಂದು ಟ್ವೀಟ್‌ನಲ್ಲಿ ಅವರು, ನಾಗೇಂದ್ರ ಅವರ ಸಾವಿನ ವಿಷಯದಲ್ಲಿ ಸರ್ಕಾರಕ್ಕೆ ಯಾರನ್ನೂ ರಕ್ಷಿಸುವ ಇಚ್ಛೆಯಿಲ್ಲ. ಯಾರೇ ತಪ್ಪು ಮಾಡಿದರೂ ಅದಕ್ಕೆ ಕ್ಷಮೆಯಿಲ್ಲ. ಪ್ರತಿಭಟಿಸುವುದನ್ನು ನಿಲ್ಲಿಸಿ. ಕಾರ್ಯಪ್ರವೃತ್ತರಾಗಿ ರೋಗಿಗಳ ಸಂಕಷ್ಟಕ್ಕೆ ನೆರವಾಗಿ. ಜನ ಸೇವೆಯೇ ಜನಾರ್ಧನ ಸೇವೆ. ತನಿಖೆಯ ನಂತರ ಸತ್ಯ ತಿಳಿದೇ ತಿಳಿಯುತ್ತದೆ ಎಂದು ಹೇಳಿದ್ದಾರೆ.


from India & World News in Kannada | VK Polls https://ift.tt/34oD3iH

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...