ವೆಂಟಿಲೇಟರ್ ರಫ್ತಿಗೆ ಅವಕಾಶ, ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದರೂ ವೆಂಟಿಲೇಟರ್‌ಗಳ ರಫ್ತಿಗೆ ಕೇಂದ್ರ ಸರ್ಕಾರ ಅವಕಾಶ ನೀಡಲು ಮುಂದಾಗಿರುವುದಕ್ಕೆ ವಿರೋಧ ಪಕ್ಷದ ನಾಯಕ ಕಿಡಿಕಾರಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿದ ಅವರು, ಕರ್ನಾಟಕದಲ್ಲಿ ಪ್ರತಿದಿನ 5000ಕ್ಕೂ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ದಾಖಲಾಗುತ್ತಿವೆ, ಸರಾಸರಿ 80-90 ಮಂದಿ ಸಾಯುತ್ತಿದ್ದಾರೆ.‌ಸಚಿವ ಡಾ. ಹರ್ಷವರ್ಧನ್‌ ಪ್ರಕಾರ ಕೊರೊನಾ ಸಾವಿನ ಪ್ರಮಾಣ ಇಳಿಯುತ್ತಿದೆಯಂತೆ. ಅದಕ್ಕಾಗಿ ವೆಂಟಿಲೇಟರ್ ರಫ್ತಿಗೆ ಅವಕಾಶಕ್ಕೆ ಕೊಡ್ತಾರಂತೆ.ಹೃದಯಹೀನ‌ ಸರ್ಕಾರ” ಎಂದು ಜರಿದಿದ್ದಾರೆ. ರಾಜ್ಯದಲ್ಲಿ ಕೊರೊನಾ ಸಾವು ಹೆಚ್ಚಳಕ್ಕೆ ವೆಂಟಿಲೇಟರ್ ಕೊರತೆಯೂ ಒಂದು ಕಾರಣ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸಕ್ರಿಯ ಸೋಂಕು ಪ್ರಕರಣಗಳು 57,396.ಲಭ್ಯ ಇರುವ ವೆಂಟಿಲೇಟರ್ ‌ಗಳು ಕೇವಲ 801. ಒಟ್ಟು ರಾಜ್ಯದ ಸ್ಥಿತಿ ಇನ್ನೂ ಚಿಂತಾಜನಕ. ನರೇಂದ್ರ ಸರ್ಕಾರಕ್ಕೆ ರಫ್ತು ಹೆಚ್ಚಿಸುವ ಚಿಂತೆ ಎಂದು ಟ್ವೀಟ್ ಮೂಲಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕು ಪ್ರಕರಣ ಹಾಗೂ ಸಾವಿನ ಸಂಖ್ಯೆ ಹೆಚ್ಚಾಗಿತ್ತಿರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಈ ನಡುವೆ ಹಲವು ಆಸ್ಪತ್ರೆಗಳಲ್ಲಿ ವೆಂಟಿಲೇಟರ್‌ಗಳ ಕೊರತೆಯೂ ಎದುರಾಗಿದೆ. ವೆಂಟಿಲೇಟರ್‌ ಇಲ್ಲ ಎಂದ ಕಾರಣ ನೀಡಿ ಚಿಕಿತ್ಸೆ ನಿರಾಕರಣೆ ಮಾಡಿದ ಹಲವು ಉದಾಹರಣೆಗಳು ಇವೆ.


from India & World News in Kannada | VK Polls https://ift.tt/3fo5aAB

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...