"ಸಿಎಂ ಬಿಎಸ್‌ವೈ, ಅಮಿತ್‌ ಶಾ ಶೀಘ್ರ ಗುಣಮುಖರಾಗಲಿ" ಟ್ವೀಟ್‌ ಮೂಲಕ ಎಚ್‌ಡಿಕೆ ಪ್ರಾರ್ಥನೆ!

ಬೆಂಗಳೂರು: ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಹಾಗೂ ಕೇಂದ್ರ ಗೃಹ ಸಚಿವ ಶೀಘ್ರ ಕೊರೊನಾದಿಂದ ಮುಕ್ತರಾಗಲಿ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹಾರೈಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್‌ ಮಾಡಿದ ಮಾಜಿ ಸಿಎಂ, " ಮಾನ್ಯ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ತಗುಲಿರುವ ವಿಷಯ ತಿಳಿದು ಮನಸ್ಸಿಗೆ ತೀವ್ರ ನೋವುಂಟಾಗಿದೆ. ಅವರು ಶೀಘ್ರ ಗುಣಮುಖರಾಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ" ಎಂದು ಟ್ವೀಟ್‌ ಮಾಡಿದ್ದಾರೆ. ಅಲ್ಲದೇ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೂ ಹಾರೈಸಿದ ಕುಮಾರಸ್ವಾಮಿ, "ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೂ ಕೂಡ ಕೊರೊನಾ ಸೋಂಕಿನಿಂದ ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಜನ ಸೇವೆಯಲ್ಲಿ ತೊಡಗಿರುವ ಜನಪ್ರತಿನಿಧಿಗಳು ಅತ್ಯಂತ ಎಚ್ಚರಿಕೆಯಿಂದ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಈ ಮೂಲಕ ಮನವಿ ಮಾಡಿಕೊಳ್ಳುತ್ತೇನೆ". ಎಂದು ಟ್ವೀಟ್‌ ಮಾಡಿದ್ದಾರೆ. ಅಲ್ಲದೇ "ಮುಖ್ಯಮಂತ್ರಿ, ಸಚಿವರು ಹಾಗೂ ಈ ಮಾರಕ ಸೋಂಕು ತಗುಲಿರುವ ಜನತೆ ಶೀಘ್ರ ಚೇತರಿಸಿಕೊಂಡು, ಈ ಸೋಂಕು ಮೆಟ್ಟಿನಿಲ್ಲುವ ಶಕ್ತಿ ದಯಪಾಲಿಸುವಂತೆ ಭಗವಂತನಲ್ಲಿ ಪ್ರಾರ್ಥನೆ ಮಾಡುತ್ತೇನೆ. ಎಲ್ಲರ ಪ್ರಾರ್ಥನೆ, ಆಶೀರ್ವಾದ, ಸದಾಶಯ ನಿಮ್ಮೊಂದಿಗೆ ಇದೆ" ಎಂದು ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ. ಕೊರೊನಾ ಪರೀಕ್ಷೆಯಲ್ಲಿ ಸಿಎಂ ಯಡಿಯೂರಪ್ಪ ಹಾಗೂ ಅಮಿತ್ ಶಾ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಈ ಹಿನ್ನೆಲೆ ಉಭಯ ನಾಯಕರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.


from India & World News in Kannada | VK Polls https://ift.tt/39Rpn0y

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...