ಸೆಕ್ಯೂರಿಟಿ ಗಾರ್ಡ್‌ನನ್ನು ಕೊಂದು ಎಟಿಎಂ ದರೋಡೆಗೈದ ದುಷ್ಕರ್ಮಿಗಳು..!

: ಎಟಿಎಂ ಒಡೆಯಲು ಯತ್ನಿಸಿದ ಮೂವರು ದರೋಡೆಕೋರರು ಸೆಕ್ಯುರಿಟಿ ಗಾರ್ಡ್ನನ್ನು ಹತ್ಯೆ ಮಾಡಿ ಪರಾರಿಯಾದ ಘಟನೆ ಸಿಂದಗಿ ಪಟ್ಟಣದ ಐಸಿಐಸಿಐ ಬ್ಯಾಂಕ್‌ನಲ್ಲಿ ತಡರಾತ್ರಿ ನಡೆದಿದೆ. ಪಟ್ಟಣದ ಎಪಿಎಂಸಿ ಬಳಿಯ ಐಸಿಐಸಿಐ ಬ್ಯಾಂಕ್ ಎಟಿಎಂಗೆ ದರೋಡೆಕೋರರು ತಡರಾತ್ರಿ 1.30ರ ಸುಮಾರಿಗೆ ನುಗ್ಗಿದ್ದಾರೆ. ಮೊದಲ ಎಟಿಎಂ ಬಳಿ ಮಲಗಿದ್ದ ಸೆಕ್ಯುರಿಟಿ ಗಾರ್ಡ್ ರಾಹುಲ್ ಖೀರು ಲಮಾಣಿ (25)ಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆ ಮಾಡಿದ್ದಾರೆ. ನಂತರ ಎಟಿಎಂನಿಂದ ಹಣ ಎಗರಿಸಲು ಅದೇ ಸುತ್ತಿಗೆಯಿಂದ ಎಟಿಎಂ ಒಡೆಯಲು ಯತ್ನಿಸಿದ್ದಾರೆ. ಅಷ್ಟರೊಳಗಾಗಿ ಸೈರನ್ ಕೂಗಿಕೊಂಡಾಗ ಸ್ಥಳದಿಂದ ಪರಾರಿಯಾಗಿದ್ದಾರೆ. ದರೋಡೆಕೋರರು ಎಟಿಎಂನಲ್ಲಿದ್ದ ಹಣ ಕದಿಯಲು ಆಗಮಿಸಿರುವುದು ಅಲ್ಲಿನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೂವರು ಮಂಕಿ‌ ಕ್ಯಾಪ್ ಹಾಕಿಕೊಂಡು ಆಗಮಿಸಿರುವ ಕಾರಣ ಅವರ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಬೆರಳಚ್ಚು ತಜ್ಞರು, ಶ್ವಾನದಳ ಆಗಮಿಸಿ ಪರಿಶೀಲನೆ ನಡೆಸಲಾಗಿದೆ. ಘಟನೆ ಸಂಬಂಧ ಸಿಂದಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


from India & World News in Kannada | VK Polls https://ift.tt/32msWIO

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...