ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಆರಂಭ: ರಾಜೀನಾಮೆ ಅಂಗೀಕರಿಸುವಂತೆ ಸೋನಿಯಾ ಮನವಿ!

ನವದೆಹಲಿ: ಪಕ್ಷದ ಆರಂಭವಾಗಿದ್ದು, ಪಕ್ಷದ ಹಿರಿಯ ನಾಯಕರು ಸಭೆಯಲ್ಲಿ ಭಾಗವಹಿಸುವ ಮೂಲಕ ಸಭೆಗೆ ಚಾಲನೆ ನೀಡಿದ್ದಾರೆ. ಈ ಮಧ್ಯೆ ಸಭೆಯಲ್ಲಿ ಅವರ ಪತ್ರವನ್ನು ಓದಿದ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ಸೋನಿಯಾ ಅಧ್ಯಕ್ಷ ಸ್ಥಾನದಿಂದ ಬಿಡುಗಡೆ ಬಯಸಿದ್ದಾರೆ ಎಂದು ತಿಳಿಸಿದರು. ಪಕ್ಷದ ಮಧ್ಯಂತರ ಅಧ್ಯಕ್ಷೆಯಾಗಿರುವ ಸೋನಿಯಾ ಗಾಂಧಿ, ಇದೀಗ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಬಯಸಿದ್ದಾರೆ. ಆದರೆ ಅಧ್ಯಕ್ಷ ಪಟ್ಟ ಸ್ವೀಕರಿಸಲು ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಸಿದ್ಧರಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಂದಿಗ್ಧ ಪರಿಸ್ಥಿತಿಯಲ್ಲಿ ಸಿಲುಕಿರುವ ಕಾಂಗ್ರೆಸ್ ಪಕ್ಷ ಅಧ್ಯಕ್ಷ ಸ್ಥಾನಕ್ಕೆ ಸೂಕ್ತವಾದ ವ್ಯಕ್ತಿಯ ಹುಟುಕಾಟದಲ್ಲಿ ನಿರತವಾಗಿದೆ. ಈಗಾಗಲೇ ಆರಂಭವಾಗಿರುವ ಸಭೆಯಲ್ಲಿ ಅಧ್ಯಕ್ಷ ಸ್ಥಾನದ ಕುರಿತು ಚರ್ಚೆ ಪ್ರಾರಂಭವಾಗಿದೆ. ವಿಡಿಯೋ ಕಾನ್ಫರೆನ್ಸ್ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ಹಿರಿಯ ನಾಯಕರಾದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಪಂಜಾಬ್ ಮುಖ್ಯಮಂತ್ರಿ ಕ್ಯಾ.ಅಮರೀಂದರ್ ಸಿಂಗ್, ಪ್ರಿಯಾಂಕಾ ಗಾಂಧಿ ವಾದ್ರಾ, ಸೇರಿದಂತೆ ಎಲ್ಲಾ ನಾಯಕರೂ ಭಾಗವಹಿಸಿದ್ದಾರೆ. ಆದರೆ ಸೋನಿಯಾ ಗಾಂಧಿ ಅವರೇ ಪಕ್ಷದ ಅಧ್ಯಕ್ಷರಾಗಿ ಮುಂದುವರೆಯಬೇಕು ಎಂದು ಸಭೆಯಲ್ಲಿ ಡಾ. ಮನಮೋಹನ್ ಸಿಂಗ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಸೋನಿಯಾ ಅವರೇ ಪಕ್ಷದ ಮುಖ್ಯಸ್ಥರಾಗಿ ಮುಂದುವರೆಯುವುದು ಸೂಕ್ತ ಎಂದು ಡಾ. ಸಿಂಗ್ ಹೇಳಿದ್ದಾರೆ.


from India & World News in Kannada | VK Polls https://ift.tt/3gpMv7Q

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...