ಮೈಸೂರು ಮಹಾನಗರ ಪಾಲಿಕೆ ಉಪ ಆಯುಕ್ತ ನಾಗರಾಜು ಮನೆ ಮೇಲೆ ಎಸಿಬಿ ದಾಳಿ

: ಸಾಂಸ್ಕೃತಿಕ ನಗರಿಯಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಭ್ರಷ್ಟರಿಗೆ ಬಿಸಿ ಮುಟ್ಟಿಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಖಚಿತ ಮಾಹಿತಿಯ ಆಧಾರದ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಮೈಸೂರು ಅಭಿವೃದ್ಧಿ ಅಧಿಕಾರಿ ಮತ್ತು ಉಪ ಆಯುಕ್ತ ಮನೆ ಮೇಲೆ ದಾಳಿ ನಡೆಸಿದ್ದಾರೆ. ಉಪ ಆಯುಕ್ತ ನಾಗರಾಜು ಅವರ ಕುವೆಂಪು ನಗರದಲ್ಲಿರುವ ನಿವಾಸ, ಪಾಲಿಕೆ ಕಚೇರಿ ಮತ್ತು ರಾಮನಗರದ ಸಂಬಂಧಿಕರ ಮನೆಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ನಾಗರಾಜು ಮೇಲೆ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿಕೊಂಡಿರೋ ಆರೋಪ ಬಂದಿತ್ತು. ಈ ಹಿನ್ನೆಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ಎಸಿಬಿ ಇಲಾಖೆಯ ಎಸ್‌ಪಿಯವರ ಮಾರ್ಗದರ್ಶನದಲ್ಲಿ ರಾಮನಗರ ಡಿವೈಎಸ್‌ಪಿ ನೇತೃತ್ವದಲ್ಲಿ ಮೈಸೂರು, ರಾಮನಗರದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ನಾಗರಾಜು ಅವರಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅಲ್ಲದೇ ಭ್ರಷ್ಟಾಚಾರ ನಡೆಸಿದ್ದಕ್ಕೆ ಸಂಬಂಧಿಸಿದಂತೆ ಮಾಹಿತಿ ಕಲೆ ಹಾಕುತ್ತಿದ್ದಾರೆ.


from India & World News in Kannada | VK Polls https://ift.tt/3b4HbpG

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...