ಬೆಂಗಳೂರು: ಬೆಂಗಳೂರಿನ ವ್ಯಾಪ್ತಿಯಲ್ಲಿ ಶಾಕಿಂಗ್ ಘಟನೆಯೊಂದು ನಡೆದಿದೆ. 15 ವಯಸ್ಸಿನ ಬಾಲಕನೊಬ್ಬ 18 ತಿಂಗಳ ಮಗುವಿನ ಮೇಲೆ ನಡೆಸಿರುವ ಘಟನೆ ವರದಿಯಾಗಿದೆ. ಇನ್ನು ಲೈಂಗಿಕ ದೌರ್ಜನ್ಯದ ಆರೋಪ ಹಿನ್ನೆಲೆ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. 15ರ ಬಾಲಕ ಮಗುವನ್ನು ಆಟ ಆಡುವುದಾಗಿ ಹೇಳಿ ಅಲ್ಲೆ ಪಕ್ಕದ ದೇವಾಲಯದ ಬಳಿ ಕರೆದುಕೊಂಡು ಹೋಗಿದ್ದಾನಂತೆ. ನಂತರ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಮಗುವಿನ ಕುಟುಂಬ ಇದೇ ದೇವಾಲಯದ ಪಕ್ಕದಲ್ಲಿ ವಾಸವಿರುವುದಾಗಿ ತಿಳಿದುಬಂದಿದೆ. ಇನ್ನು ಈ ಘಟನೆ ಸೆಪ್ಟೆಂಬರ್ 17 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.
from India & World News in Kannada | VK Polls https://ift.tt/2RMZ978