ಹೊಸದಿಲ್ಲಿ: ಭಾರತದ ಮಾಜಿ ಪ್ರಧಾನಿ, ಯುಪಿಎ ಸರ್ಕಾರದ ಅವಧಿಯಲ್ಲಿ ಎರಡು ಬಾರಿ ಪ್ರಧಾನಿಯಾಗಿ ಕರ್ತವ್ಯ ನಿರ್ವಹಿಸಿದ ಆರ್ಥಿಕ ತಜ್ಞ ಅವರಿಗೆ ಇಂದು 87 ವರ್ಷ ತುಂಬುತ್ತಿದೆ. 88ನೇ ವರ್ಷಕ್ಕೆ ಕಾಲಿಡುತ್ತಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಪ್ರಧಾನಿ ಸೇರಿದಂತೆ ದೇಶಾದ್ಯಂತ ಗಣ್ಯರು ಹುಟ್ಟಿದ ದಿನದ ಶುಭಾಶಯಗಳನ್ನು ಸಲ್ಲಿಸಿದ್ದಾರೆ. ಡಾ ಮನಮೋಹನ್ ಸಿಂಗ್ ಹುಟ್ಟಿದ ದಿನಕ್ಕೆ ಶುಭಾಶಯ ತಿಳಿಸಿರುವ ಪ್ರಧಾನಿ ಮೋದಿ, ಡಾ.ಮನಮೋಹನ್ ಸಿಂಗ್‌ಜಿ ಅವರಿಗೆ ಜನ್ಮದಿನದ ಶುಭಾಶಯಗಳು. ದೇವರು ನಿಮಗೆ ಸುದೀರ್ಘ ಮತ್ತು ಆರೋಗ್ಯಕರ ಜೀವನವನ್ನು ಆಶೀರ್ವದಿಸಬೇಕೆಂದು ನಾನು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಇತ್ತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಮನಮೋಹನ್ ಸಿಂಗ್ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿದ್ದು, ಪ್ರಧಾನಿಯಾಗಿ ಡಾ ಮನಮೋಹನ್ ಸಿಂಗ್ ಅವರ ಅನುಪಸ್ಥಿತಿಯನ್ನು ಭಾರತ ಅನುಭವಿಸುತ್ತಿದೆ. ಅವರ ಪ್ರಾಮಾಣಿಕತೆ, ಸಭ್ಯತೆ ಮತ್ತು ಸಮರ್ಪಣಾ ಭಾವ ನಮ್ಮೆಲ್ಲರಿಗೆ ಸ್ಪೂರ್ತಿಯ ಚಿಲುಮೆಯಾಗಿದೆ. ಸಿಂಗ್ ಅವರಿಗೆ ಜನ್ಮದಿನದ ಶುಭಾಷಯಗಳು ಈ ವರ್ಷ ನಿಮಗೆ ಸುಂದರವಾಗಿರಲಿ ಎಂದು ಟ್ವೀಟ್ ಮಾಡಿದ್ದಾರೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜನ್ಮದಿನದ ಶುಭಾಶಯ ತಿಳಿಸಿದ್ದು, ಈ ಕುರಿತು ಟ್ವೀಟ್ ಮಾಡಿರುವ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಸುದೀರ್ಘ ಮತ್ತು ಆರೋಗ್ಯಕರ ಜೀವನವನ್ನು ದಯಪಾಲಿಸಲಿ ಎಂದು ಟ್ವೀಟ್ ಮಾಡಿದ್ದಾರೆ. ಇನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡ ಸಿಂಗ್ ಅವರಿಗೆ ಜನ್ಮ ದಿನದ ಶುಭಾಶಯ ತಿಳಿಸಿದ್ದು, ಮಾಜಿ ಪ್ರಧಾನಮಂತ್ರಿ ಶ್ರೀ ಮನಮೋಹನ್ ಸಿಂಗ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಅನುಗ್ರಹ ಸದಾ ಇರಲಿ ಎಂದು ಟ್ವೀಟ್ ಮಾಡಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ,.ದೂರದೃಷ್ಟಿ, ಜನಪರ ಕಾಳಜಿ ಮತ್ತು ಪ್ರಾಮಾಣಿಕ ನಡವಳಿಕೆಗಳಿಂದ ಭಾರತವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಿದ ಸರಳ, ಸಜ್ಜನ, ಸತ್ಯವಂತ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮ್ಮ ಬದುಕು ಮತ್ತು ಸಾಧನೆ ನಮಗೆ ಪ್ರೇರಣೆ ಎಂದು ಶುಭ ಹಾರೈಸಿದ್ದಾರೆ.
from India & World News in Kannada | VK Polls https://ift.tt/3i9LJg5