ಉಡುಪಿ: ಕೇಂದ್ರ, ರಾಜ್ಯದ ಕೃಷಿ ನೀತಿ ವಿರೋಧಿಸಿ ಧರಣಿ ಕುಳಿತ ಪ್ರತಿಭಟನಾಕಾರರ ಬಂಧನ

ಉಡುಪಿ: ರೈತ ವಿರೋಧಿ ವಿಧೇಯಕ, ಎಪಿಎಂಸಿ ಕಾಯಿದೆ ತಿದ್ದುಪಡಿ ಸಹಿತ ರಾಜ್ಯ ಹಾಗೂ ಕೇಂದ್ರದ ನಡೆಯನ್ನು ವಿರೋಧಿಸಿ ರೈತಪರ ಸಂಘಟನೆಗಳು ರಾಜ್ಯ ಬಂದ್‌ಗೆ ಕರೆ ಕೊಟ್ಟಿದ್ದು, ಸಂಚಾರಕ್ಕೆ ತಡೆವೊಡ್ಡಿ ಸರ್ವೀಸ್ ಬಸ್‌ನಿಲ್ದಾಣದಲ್ಲಿ ಧರಣಿ ಕುಳಿತ ಪ್ರತಿಭಟನಾಕಾರರನ್ನು ಸೋಮವಾರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರೈತರ ಹೋರಾಟಕ್ಕೆ ಜಿಲ್ಲೆಯಲ್ಲಿ ಸುಮಾರು 18ಕ್ಕೂ ಅಧಿಕ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಸರ್ವೀಸ್ ಬಸ್‌ನಿಲ್ದಾಣದಲ್ಲಿ ನೂರಾರು ಸಂಖ್ಯೆಯಲ್ಲಿ ಒಟ್ಟು ಸೇರಿದ್ದರು. ಪ್ರತಿಭಟನಾಕಾರರು ಬಂದ್‌ಗೆ ಬೆಂಬಲ ಸೂಚಿಸುವಂತೆ ಬಸ್‌ ಸಂಚಾರಕ್ಕೆ ಅಡ್ಡಿ ಪಡಿಸಿ ಮನವೊಲಿಸುವ ಪ್ರಯತ್ನ ಮಾಡಿದ್ದರು. ಸ್ಥಳದಲ್ಲಿದ್ದ ಪೊಲೀಸರು ಬಲವಂತದ ಬಂದ್ ಮಾಡದಂತೆ ಕೇಳಿಕೊಂಡರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದ್ದು, ಧರಣಿ ಕುಳಿತ ಮುಖಂಡರನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ನಗರದಲ್ಲಿ ಆಯಾಕಟ್ಟಿನ ಸ್ಥಳದಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು. ಹಿರಿಯ ಅಧಿಕಾರಿಗಳು ನಗರದ ಸುತ್ತಲು ತಿರುಗಾಡಿ ಭದ್ರತೆಯ ಉಸ್ತುವಾರಿ ನೋಡಿಕೊಂಡಿದ್ದರು. ಮುಖಂಡರಾದ ರಮೇಶ್ ಕಾಂಚನ್, ಯತೀಶ್ ಕರ್ಕೇರಾ, ಪ್ರಖ್ಯಾತ್ ಶೆಟ್ಟಿ, ಅಸ್ಸಾರ್ ಆಹ್ಮದ್, ಬಾಲಕೃಷ್ಣ ಸಹಿತ ಹತ್ತಾರು ಮುಖಂಡರನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ಪೊಲೀಸರು ಬಂಧಿಸುವ ವೇಳೆ ಪ್ರತಿಭಟನಾಕಾರರು ಬಿಜೆಪಿ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.


from India & World News in Kannada | VK Polls https://ift.tt/2S1jcii

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...