ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಇನ್ನಿಲ್ಲ: ಪ್ರಧಾನಿ ಸೇರಿ ಗಣ್ಯರ ಶೋಕ!

ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ನಾಯಕ ನಿಧನರಾಗಿದ್ದಾರೆ. ತಿವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಜಸ್ವಂತ್ ಸಿಂಗ್, ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಜಸ್ವಂತ್ ಸಿಂಗ್(82) ಅವರನ್ನು ಕಳೆದ ಜೂನ್‌ನಲ್ಲೇ ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು(ಭಾನುವಾರ) ಬೆಳಗಿನ ಜಾವ ಸುಮಾರು 6:55ಕ್ಕೆ ಜಸ್ವಂತ್ ಸಿಂಗ್ ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಕೇಂದ್ರದ ಹಣಕಾಸು ಸಚಿವ, ರಕ್ಷಣಾ ಸಚಿವ ಹಾಗೂ ವಿದೇಶಾಂಗ ಸಚಿವರಾಗಿ ಸೇವೆ ಸಲ್ಲಿಸಿರುವ ಜಸ್ವಂತ್ ಸಿಂಗ್, ಬಿಜೆಪಿಯ ಹಿರಿಯ ನಾಯಕರ ಸಾಲಿನಲ್ಲಿ ಗುರುತಿಸಿಕೊಂಡಿದ್ದರು. 1950-60ರ ದಶಕದಲ್ಲಿ ಭಾರತೀಯ ಸೇನೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಜಸ್ವಂತ್ ಸಿಂಗ್, ರಾಜಕೀಯ ಕ್ಷೇತ್ರದತ್ತ ಆಕರ್ಷಿತರಾಗಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಪ್ರಧಾನಿ ಶೋಕ: ಇನ್ನು ಜಸ್ವಂತ್ ಸಿಂಗ್ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಅತ್ಯಂತ ಶ್ರದ್ಧೆಯಿಂದ ದೇಶಸೇವೆಗೈದಿರುವ ಜಸ್ವಂತ್ ಸಿಂಗ್ ಆದರ್ಶಗಳು ಸದಾ ನಮ್ಮೊಂದಿಗೆ ಇರಲಿವೆ ಎಂದು ಕಂಬನಿ ಮಿಡಿದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಮೊದಲು ಸೇನೆಯಲ್ಲಿ ಹಾಗೂ ನಂತರ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಮೂಲಕ ದೆಶಕ್ಕೆ ತಮ್ಮದೇ ಆದ ಕೊಡುಗೆ ನೀಡಿರುವ ಜಸ್ವಂತ್ ಸಿಂಗ್ ಸದಾ ಸ್ಮರಣೀಯರು ಎಂದು ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಜಸ್ವಂತ್ ಪುತ್ರ ಮನ್ವೇಂದ್ರ ಸಿಂಗ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ಈ ದು:ಖದ ಘಳಿಗೆಯಲ್ಲಿ ನಾವು ಜಸ್ಂತ್ ಸಿಂಗ್ ಅವರ ಕುಟುಂಬ ವರ್ಗದೊಂದಿಗೆ ಇರುವುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ. ಇನ್ನು ಜಸ್ವಂತ್ ಸಿಂಗ್ ನಿಧನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.


from India & World News in Kannada | VK Polls https://ift.tt/2G2Ri38

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...