'ಪ್ಲೀಸ್‌ ಬನ್ನಿ ಮಿಸ್ಟರ್. ಐಪಿಎಲ್‌' : ಐಪಿಎಲ್‌ಗೆ ಮರಳುವಂತೆ ರೈನಾಗೆ ಸಿಎಸ್‌ಕೆ ಅಭಿಮಾನಿಗಳಿಂದ ಮನವಿ!

ಹೊಸದಿಲ್ಲಿ: ಪ್ರಸ್ತುತ ಯುಎಇಯಲ್ಲಿ ನಡೆಯುತ್ತಿರುವ ಹದಿಮೂರನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಗೆ ಸ್ಟಾರ್‌ ಬ್ಯಾಟ್ಸ್‌ಮನ್‌ ಮರಳಬೇಕೆಂದು ಅಭಿಮಾನಿಗಳು ಮನವಿ ಮಾಡಿಕೊಂಡಿದ್ದಾರೆ. ಶುಕ್ರವಾರ ದುಬೈನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ತಮ್ಮ ಮೂರನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 44 ರನ್‌ಗಳಿಂದ ಸೋಲು ಅನುಭವಿಸಿತ್ತು. ಆ ಮೂಲಕ ಆಡಿದ ಮೂರು ಪಂದ್ಯಗಳಲ್ಲಿ ಚೆನ್ನೈ ಫ್ರಾಂಚೈಸಿ ಒಂದು ಗೆದ್ದು ಎರಡು ಪಂದ್ಯಗಳಲ್ಲಿ ಸೋಲುಂಡಿದೆ. ಮೊದಲನೇ ಹಣಾಹಣಿಯಲ್ಲಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ಪಡೆದಿತ್ತು. ಡೆಲ್ಲಿ ಕ್ಯಾಪಿಟಲ್ಸ್ ನೀಡಿದ್ದ 176 ರನ್‌ಗಳ ಗುರಿ ಹಿಂಬಾಲಿಸಿದ ಚೆನ್ನೈ ಸೂಪರ್‌ ಕಿಂಗ್ಸ್ ತಂಡ, ನಿಗದಿತ 20 ಓವರ್‌ಗಳಿಗೆ 7 ವಿಕೆಟ್‌ಗಳ ನಷ್ಟಕ್ಕೆ 131 ರನ್‌ಗಳಿಗೆ ಸೀಮಿತವಾಯಿತು. ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ, ಪೃಥ್ವಿ ಶಾ ಅವರ ಅರ್ಧಶತಕದ ಬಲದಿಂದ ನಿಗದಿತ 20 ಓವರ್‌ಗಳಿಗೆ ಮೂರು ವಿಕೆಟ್‌ಗಳನ್ನು ಕಳೆದುಕೊಂಡು 175 ರನ್‌ಗಳನ್ನು ಗಳಿಸಿತು. ಒಂದು ಹಂತದಲ್ಲಿ 200 ರನ್‌ಗಳನ್ನು ಗಳಿಸುವ ಹಾದಿಯಲ್ಲಿದ್ದ ಡೆಲ್ಲಿಯನ್ನು, ಧೋನಿ ತಮ್ಮ ಚಾಣಾಕ್ಷತನದಿಂದ 180 ರನ್‌ಗಳ ಒಳಗೆ ನಿಯಂತ್ರಿಸಲು ಸಾಧ್ಯವಾಯಿತು. ಆದರೆ, ಗುರಿ ಹಿಂಬಾಲಿಸಿದ ಚೆನ್ನೈ ಸೂಪರ್‌ ಕಿಂಗ್ಸ್ ತಂಡದಲ್ಲಿ ಬ್ಯಾಟಿಂಗ್‌ ವಿಭಾಗದಲ್ಲಿ ಫಾಫ್‌ ಡು'ಪ್ಲೆಸಿಸ್‌ ಬಿಟ್ಟರೆ ಇನ್ನುಳಿದ ಆಟಗಾರರು ವಿಫಲರಾಗುತ್ತಿದ್ದಾರೆ. ಮೊದಲನೇ ಹಣಾಹಣಿಯಲ್ಲಿ ಗೆದ್ದ ಚೆನ್ನೈ, ನಂತರ, ರಾಜಸ್ಥಾನ್‌ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸತತ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಎರಡು ಸೋಲುಗಳಿಂದ ತೀವ್ರ ಬೇಸರಕ್ಕೆ ಒಳಗಾಗಿರುವ ಚೆನ್ನೈ ಸೂಪರ್‌ ಕಿಂಗ್ಸ್ ಅಭಿಮಾನಿಗಳು ಸುರೇಶ್‌ ರೈನಾ ಐಪಿಎಲ್‌ಗೆ ಮರಳಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧದ ಪಂದ್ಯದ ಸೋಲಿನ ಬಳಿಕ ಅಭಿಮಾನಿಗಳು ಟ್ವಿಟರ್‌ನಲ್ಲಿ ತಮ್ಮ ನೆಚ್ಚಿನ ಆಟಗಾರ ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಸೇರ್ಪಡೆಯಾಗುವಂತೆ ಮನವಿ ಮಾಡಿದ್ದಾರೆ. ಕಳೆದ ತಿಂಗಳು ಸುರೇಶ್‌ ರೈನಾ ವೈಯಕ್ತಿಕ ಕಾರಣಗಳಿಂದ ಟೂರ್ನಿಯಿಂದ ಹೊರ ನಡೆದಿದ್ದರು. 2008ರ ಉದ್ಘಾಟನಾ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಟೂರ್ನಿಯಿಂದ ಇಲ್ಲಿಯವರೆಗೂ ಸುರೇಶ್‌ ರೈನಾ ಚೆನ್ನೈ ಸೂಪರ್‌ ಕಿಂಗ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಐಪಿಎಲ್‌ ಟೂರ್ನಿಯಲ್ಲಿಯೇ ಅತಿ ಹೆಚ್ಚು ರನ್‌ಗಳಿಸಿದ ಬ್ಯಾಟ್ಸ್‌ಮನ್‌ ಎಂಬ ಸಾಧನೆ ಇವರ ಹೆಸರಲ್ಲಿದೆ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/335wkJq

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...