ಬೆಂಗಳೂರು: ಬೆಂಗಳೂರಿನಲ್ಲಿ ರೈತ ಸಂಘಟನೆಗಳು ನೀಡಿದ ಕರೆಗೆ ಭಾರೀ ಬೆಂಬಲ ವ್ಯಕ್ತವಾಗಿದೆ. ಟೌನ್ಹಾಲ್ ಬಳಿ ಆಯೋಜಿಸಲಾದ ಪ್ರತಿಭಟನೆಗೆ ಭಾರೀ ಸಂಖ್ಯೆಯಲ್ಲಿ ಪ್ರತಿಭನಕಾರರು ಆಗಮಿಸಿದ್ದಾರೆ. ರೈತ ಸಂಘ, ಹಸಿರು ಸೇನೆ, ಕನ್ನಡ ಪರ ಸಂಘಟನೆಗಳು ಸೇರಿ ಇನ್ನಿತರ ಸಂಘಟನೆಗಳು ಒಟ್ಟಿಗೆ ಸೇರಿಕೊಂಡು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ. ಇನ್ನು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಕೆಲವರು ಉರುಳು ಸೇವೆ ಮಾಡಿ ಸರಕಾರದ ವಿರುದ್ಧ ಪ್ರತಿಭಟಿಸಿದರು. ಇನ್ನು ಕೆಲವು ಪ್ರತಿಭಟನಕಾರರು ಅರೆನಗ್ನ ಸ್ಥಿತಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದರು. ಇನ್ನು ವಯಸ್ಸಾದ ರೈತರೊಬ್ಬರು ನೇಗಿಲು ಹಿಡಿದುಕೊಂಡು ಕಾಯ್ದೆ ಹಿಂಪಡೆಯುವಂತೆ ಕೇಳಿಕೊಂಡರು. ಇನ್ನು ಟೌನ್ಹಾಲ್ಗೆ ಸುಮ್ಮನಹಳ್ಳಿ ಸೇರಿ ವಿವಿಧ ಕಡೆಗಳಿಂದ ಪ್ರತಿಭಟನಾಕಾರರು ಆಗಮಿಸಿದ್ದರು. ಇನ್ನು ಟೌನ್ಹಾಲ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಿಂದಾಗಿ ವಾಹನ ಸಂಚಾರಕ್ಕೆ ತೊಡಕಾಗಿದೆ. ಹಲವೆಡೆ ಸಂಫುರ್ಣವಾಗಿ ಟ್ರಾಫಿಕ್ ಜಾಮ್ ಉಂಟಾಗಿದೆ. ಇನ್ನು ಮೂಲಗಳ ಪ್ರಕಾರ ಬೆಂಕಗಳೂರು ಕಮೀಷನರ್ ಕಮಲ್ ಪಂತ್ ಪ್ರತಿಭಟನೆಗೆ ಅನುಮತಿ ನೀಡಿಲ್ಲ ಎಂದು ತಿಳಿದುಬಂದಿದೆ. ಹೀಗಾಗಿ ಪ್ರತಿಭಟನೆ ನಡೆಯುವ ಮುನ್ನವೇ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆಯುವ ಸಾಧ್ಯತೆ ಇದೆ.
from India & World News in Kannada | VK Polls https://ift.tt/36jVOoq