ಉಣೆ: ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ ಜನಪ್ರಿಯತೆ ಪಡೆದಿರುವ ''ಗೆ ಚಿತ್ರಗಳನ್ನು ಕಳಿಸುವ ಸಂದರ್ಭದಲ್ಲಿ ಎಚ್ಚರಿಕೆ ವಹಿಸುವಂತೆ ಪುಣೆ ಪೊಲೀಸರು ಸಲಹೆ ನೀಡಿದ್ದಾರೆ. ಕಪಲ್ ಚಾಲೆಂಜ್‌ಗೆ ಕಳುಹಿಸುವ ಫೋಟೋಗಳನ್ನು ಕೆಲವೊಮ್ಮೆ ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಜಾಗರೂಕರಾಗಿರುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಫೇಸ್‌ಬುಕ್‌ನಲ್ಲಿ 'ಕಪಲ್' ಚಾಲೆಂಜ್'ನಲ್ಲಿ ಅಪ್ಲೋಡ್ ಮಾಡಿದ್ದ ಫೋಟೋಗಳನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿ ಹಲವರು ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಅಪ್ಲೋಡ್ ಮಾಡುವ ಮೊದಲು ಎರಡು ಸಲ ಯೋಚಿಸಿ ಎಂದು, ಪುಣೆ ಪೊಲೀಸರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯ ಮೂಲಕ ಜನರಲ್ಲಿ ಮನವಿ ಮಾಡಿದ್ದಾರೆ. ಈ ಕುರಿತು ಮಾತನಾಡಿರುವ ಪುಣೆ ಸೈಬರ್ ಪೊಲೀಸ್ ಇಲಾಖೆಯ ಇನ್ಸಪೆಕ್ಟರ್ ಜಯರಾಮ್ ಪೈಗುಡೆ, ಕಪಲ್ ಚಾಲೆಂಜ್‌ಗೆ ಕಳುಹಿಸಿದ ಫೋಟೋಗಳ ದುರುಪಯೋಗ ಕುರಿತಂತೆ ಎಚ್ಚರಿಕೆಯಿಂದ ಇರಬೆಕು ಎಂದು ಮನವಿ ಮಾಡಿದ್ದಾರೆ. ಅಲ್ಲದೇ ಈ ಕುರಿತು ಯಾವುದೇ ಅನುಮಾನ ಮೂಡಿದರೂ ಕೂಡಲೇ ಸೈಬರ್ ಕ್ರೈಂ ಪೊಲೀಸರನ್ನು ಸಂಪರ್ಕಿಸಿ ಮಾಹಿತಿ ನೀಡಬೇಕೆಂದೂ ಪುಣೆ ಪೊಲೀಸರು ತಿಳಿಸಿದ್ದಾರೆ.
from India & World News in Kannada | VK Polls https://ift.tt/2G6i0rv