ಬೆಳಗಾವಿ: ಕೊರೊನಾ ಸಾಂಕ್ರಾಮಿಕ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಮೂರು ದಿನದ ಹಿಂದಷ್ಟೇ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆಯಲ್ಲಿ ಭಾರತ ವಿಶ್ವದಲ್ಲಿ ದೇಶ ಮೂರನೇ ಸ್ಥಾನಕ್ಕೆ ಎರಿತ್ತು. ಈ ಮಧ್ಯೆ ಸರ್ಕಾರಗಳು ಕೊರೊನಾ ಹತೋಟಿಗೆ ಇನ್ನಿಲ್ಲದ ಕ್ರಮ ಕೈಗೊಳ್ಳುತ್ತಿದ್ದರೂ ಪ್ರಯೋಜವಾಗುತ್ತಿಲ್ಲ. ರಾಜ್ಯದಲ್ಲಿ ಕೂಡ ಕೊರೊನಾ ಅತೀ ವೇಗವಾಗಿ ಹರಡುತ್ತಿದ್ದು, ರಾಜಕಾರಣಿಗಳು ಕೂಡ ಇದಕ್ಕೆ ಹೊರತೇನಲ್ಲ. ಸಿಎಂ ಸೇರಿದಂತೆ ಅನೇಕ ಜನಪ್ರತಿನಿಧಿಗಳಿಗೆ ಕೊರೊನಾ ತಗುಲಿದ ನಂತರ ಇದೀಗ ಖಾನಾಪುರ ಶಾಸಕಿ ಅವರಿಗೂ ಕೊರೊನಾ ವಕ್ಕರಿಸಿದೆ. ಈ ಕುರಿತು ಸ್ವತಃ ಶಾಸಕಿ ನಿಂಬಾಳ್ಕರ್ ಅವರೇ ಟ್ವೀಟ್ ಮಾಡಿದ್ದು, ನನಗೆ ಕಾಣಿಸಿಕೊಂಡಿದೆ. ಆದರೆ ಯಾವುದೇ ರೋಗಲಕ್ಷಣಗಳಿಲ್ಲ. ಹೀಗಾಗಿ ಮನೆಯಲ್ಲೇ ಹೋಂ ಐಸೋಲೇಷನ್‌ನಲ್ಲಿದ್ದು ಕ್ಷೇತ್ರದ ಕೆಲಸಗಳನ್ನು ನೋಡಿಕೊಳ್ಳುತ್ತೇನೆ ಎಂದಿದ್ದಾರೆ. ರಾಜ್ಯದಲ್ಲಿ ಪ್ರತಿದಿನ ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾ ತಗುಲುತ್ತಿದೆ. ಇತ್ತೀಚೆಗೆ ರಾಜಕಾರಣಿಗಳಲ್ಲೂ ಕೂಡ ಕೊರೊನಾ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಆರಂಭದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪನವರಿಗೆ ಕೊರೊನಾ ಕಾಣಿಸಿಕೊಂಡಿತ್ತು. ಅದರ ಬೆನ್ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೊನಾ ಕಾಣಿಸಿಕೊಂಡು ಇಬ್ಬರೂ ಒಂದೇ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಆ ನಂತರ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಕೊರೊನಾ ಕಾಣಿಸಿಕೊಂಡಿದ್ದು ಎರಡು ದಿನದ ಹಿಂದಷ್ಟೇ ಸಂಪೂರ್ಣ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರು. ಇದೀಗ ಶಾಸಕಿ ಅಂಜಲಿ ನಿಂಬಾಳ್ಕರ್ ಅವರಿಗೂ ಕೊರೊನಾ ಕಾಣಿಸಿಕೊಂಡಿರುವುದರಿಂದ ಅವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಆತಂಕ ಎದುರಾಗಿದೆ.
from India & World News in Kannada | VK Polls https://ift.tt/3i3x9aI